ಪ್ರಲಾಪಗಳು 2:18 - ಕನ್ನಡ ಸಮಕಾಲಿಕ ಅನುವಾದ18 ಅವರ ಹೃದಯವು ಕರ್ತದೇವರ ಕಡೆಗೆ ಕೂಗಿ, ಚೀಯೋನಿನ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನಿನಗೆ ವಿಶ್ರಾಂತಿ ಬೇಡ, ನಿನ್ನ ಕಣ್ಣ ರೆಪ್ಪೆಯನ್ನು ಮುಚ್ಚಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; “ಚೀಯೋನ್ ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಿನ್ನ ಜನರು ಮೊರೆಯಿಡಲಿ ಮನಃಪೂರ್ವಕವಾಗಿ ಸಿಯೋನ್ ನಗರದ ಕೋಟೆಗೆ ಕೋಟೆಯೇ ಕಣ್ಣೀರಿಡಲಿ. ಹಗಲಿರುಳು ಕಂಬನಿ ಹರಿಯಲಿ ತೊರೆಯಂತೆ ನಿಮ್ಮ ನೇತ್ರಗಳಿಂದ ಸುರಿಯಲಿ ಒಂದೇ ಸಮನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; ಚೀಯೋನ್‍ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಜೆರುಸಲೇಮ್ ನಗರದ ಗೋಡೆಯೇ, ಮನಃಪೂರ್ವಕವಾಗಿ ಯೆಹೋವನಲ್ಲಿ ಮೊರೆಯಿಡು. ನಿನ್ನ ಕಣ್ಣೀರು ಹಗಲಿರುಳು ನದಿಯಂತೆ ಹರಿಯಲಿ, ನಿಲ್ಲಿಸಬೇಡ. ನಿನ್ನ ಕಣ್ಣುಗಳಿಗೆ ವಿರಾಮ ಸಿಗುವುದು ಬೇಡ. ಅಧ್ಯಾಯವನ್ನು ನೋಡಿ |