Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:19 - ಕನ್ನಡ ಸಮಕಾಲಿಕ ಅನುವಾದ

19 ಎದ್ದೇಳು, ರಾತ್ರಿಯಲ್ಲಿ ಕೂಗು. ನಿನ್ನ ಹೃದಯವನ್ನು ಕರ್ತದೇವರ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ ನೀರಿನಂತೆ ಹೊಯ್ದುಬಿಡಿರಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಏಕೆಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ರಾತ್ರಿಯ ಒಂದೊಂದು ಜಾವದಲ್ಲೂ ಎದ್ದು ಗೋಳಾಡಿರಿ. ನಿಮ್ಮ ಹೃದಯ ಕರಗಿ, ನೀರಾಗಿ ಸ್ವಾಮಿಯ ಮುಂದೆ ಹರಿಯಲಿ. ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈ ಮುಗಿದು ಪ್ರಾರ್ಥನೆಮಾಡಿ. ಹಸಿವಿನಿಂದ ಅವು ಮೂರ್ಛೆಹೋಗಿವೆ, ಬೀದಿಯ ಮೂಲೆಮೂಲೆಗಳಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದುಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:19
31 ತಿಳಿವುಗಳ ಹೋಲಿಕೆ  

ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ. ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ. ದೇವರು ನಮಗೆ ಆಶ್ರಯವಾಗಿದ್ದಾರೆ.


ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ. ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ. ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.


ದೇವರ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ದೇವರ ಮುಂದೆ ತಿಳಿಸಿದ್ದೇನೆ.


ಬೆಳಗಾಗುವ ಮೊದಲೇ, ಇನ್ನೂ ಕತ್ತಲಿರುವಾಗ, ಯೇಸು ಎದ್ದು ಏಕಾಂತ ಸ್ಥಳಕ್ಕೆ ಹೊರಟುಹೋಗಿ, ಅಲ್ಲಿ ಪ್ರಾರ್ಥನೆ ಮಾಡುತ್ತಿದ್ದರು.


ಅದಕ್ಕೆ ಹನ್ನಳು ಅವನಿಗೆ ಉತ್ತರವಾಗಿ, “ನನ್ನ ಒಡೆಯನೇ, ಹಾಗಲ್ಲ. ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ. ನಾನು ದ್ರಾಕ್ಷಾರಸವನ್ನಾದರೂ ಮದ್ಯಪಾನವನ್ನಾದರೂ ಕುಡಿದವಳಲ್ಲ. ನಾನು ಯೆಹೋವ ದೇವರ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ತೋಡಿಕೊಳ್ಳುತ್ತಾ ಇದ್ದೇನೆ.


ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ.


ಮಧ್ಯರಾತ್ರಿ ಆರಂಭದ ಜಾವದಲ್ಲಿ ಕಾವಲುಗಾರರನ್ನು ಬದಲಾಯಿಸಿದಾಗ, ಗಿದ್ಯೋನನೂ, ಅವನ ಸಂಗಡ ಇದ್ದ ನೂರು ಮಂದಿಯೂ ಪಾಳೆಯ ಹೊರಗೆ ಬಂದು, ತುತೂರಿಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.


ಆದರೂ ಹಗಲಿನಲ್ಲಿ ಯೆಹೋವ ದೇವರು ತಮ್ಮ ಪ್ರೀತಿಯನ್ನು ಆಜ್ಞಾಪಿಸುವರು. ರಾತ್ರಿಯಲ್ಲಿ ದೇವರ ಹಾಡನ್ನು ಹಾಡುವೆನು. ನನ್ನ ಜೀವವಾಗಿರುವ ದೇವರಿಗೆ ನಾನು ಪ್ರಾರ್ಥನೆ ಮಾಡುವೆನು.


ಆ ದಿನಗಳಲ್ಲಿ ಯೇಸು ಪ್ರಾರ್ಥಿಸುವುದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ, ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದರು.


“ಆದ್ದರಿಂದ ಜಾಗರೂಕರಾಗಿರಿ. ಮನೆಯಜಮಾನನು ಸಂಜೆಯಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಹುಂಜ ಕೂಗುವಾಗಲೋ ಬೆಳಕಾಗುವಾಗಲೋ, ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.


ರಾತ್ರಿ ಮೂರು ಗಂಟೆಯಲ್ಲಿ ಯೇಸು ಸರೋವರದ ಮೇಲೆ, ನಡೆಯುತ್ತಾ ಶಿಷ್ಯರ ಬಳಿಗೆ ಬಂದರು.


ಯೆಹೋವ ದೇವರೇ, ರಾತ್ರಿಯಲ್ಲಿ ನಿಮ್ಮ ನಾಮಸ್ಮರಣೆ ಮಾಡುವುದರಿಂದ, ನಿಮ್ಮ ನಿಯಮವನ್ನು ಕೈಕೊಳ್ಳುತ್ತೇನೆ.


ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.


ನಿನ್ನ ಪುತ್ರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ, ಎಲ್ಲಾ ಬೀದಿಗಳು ಕೂಡುವ ಚೌಕಗಳಲ್ಲಿ ಅವರು ಬಿದ್ದಿದ್ದಾರೆ. ಅವರು ಯೆಹೋವ ದೇವರ ರೋಷದಿಂದಲೂ, ನಿನ್ನ ದೇವರ ಗದರಿಕೆಯಿಂದಲೂ ತುಂಬಿದ್ದಾರೆ.


ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು. ನಿನ್ನ ಮೇಲೆ ಭಯಂಕರವಾದ ಕ್ಷಾಮವನ್ನು ಬರಮಾಡಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.


ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.


ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ, ಯೆಹೋವ ದೇವರನ್ನು ಸ್ತುತಿಸಿರಿ.


ನಾನು ಜೀವಿಸುವ ಕಾಲವೆಲ್ಲಾ ನಿಮ್ಮನ್ನೇ ಸ್ತುತಿಸುವೆನು. ನಿಮ್ಮ ಹೆಸರಿನಲ್ಲಿ ನಾನು ನನ್ನ ಕೈ ಮುಗಿಯುವೆನು.


ನಿಟ್ಟುಸಿರೇ ನನ್ನ ದೈನಂದಿನ ಆಹಾರವಾಗಿದೆ; ನನ್ನ ನರಳಾಟವು ಜಲಧಾರೆಯಂತಿದೆ.


ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟಾಗಿ ಕೂಡಿಬಂದು, ಯೆಹೋವ ದೇವರ ಮುಂದೆ ನೀರು ತಂದು ಹೊಯ್ದು, ಆ ದಿವಸದಲ್ಲಿ ಉಪವಾಸ ಮಾಡಿ, “ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ” ಎಂದು ಅಲ್ಲಿ ಹೇಳಿದರು. ಸಮುಯೇಲನು ಇಸ್ರಾಯೇಲರಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.


ಆದರೆ ಅವಳು ಸೆರೆಯಾಗಿ ದೇಶಾಂತರಕ್ಕೆ ಹೋದಳು. ಅವಳ ಕೂಸುಗಳು ಸಹ ಎಲ್ಲಾ ಬೀದಿಗಳ ಮುಖ್ಯ ಸ್ಥಳಗಳಲ್ಲಿ ಅಪ್ಪಳಿಸಲಾಯಿತು. ಅವಳ ಪ್ರಧಾನರಿಗೋಸ್ಕರ ಚೀಟುಹಾಕಿದರು. ಅವಳ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಕಟ್ಟಿದರು.


“ನಿನ್ನ ದೇವರು ಎಲ್ಲಿ?” ಎಂದು ಜನರು, ದಿನವೆಲ್ಲಾ ನನ್ನನ್ನು ಕೇಳುವುದರಿಂದ ಹಗಲುರಾತ್ರಿ ನನ್ನ ಕಣ್ಣೀರೇ ನನಗೆ ಆಹಾರವಾಗಿದೆ.


ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ.


ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ. ನಿಮ್ಮ ಪುತ್ರಿಯರಿಗೆ ಗೋಳಾಟವನ್ನೂ, ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.


ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’ ”


ನಿನ್ನ ಮುದ್ದುಮಕ್ಕಳಿಗೋಸ್ಕರ ತಲೆ ಬೋಳಿಸಿಕೊಂಡು ಕ್ಷೌರಮಾಡಿಸಿಕೋ. ನಿನ್ನ ಬೋಳುತನವನ್ನು ಹದ್ದಿನಂತೆ ಮಾಡಿಕೋ. ಏಕೆಂದರೆ ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು