ಪ್ರಲಾಪಗಳು 2:3 - ಕನ್ನಡ ಸಮಕಾಲಿಕ ಅನುವಾದ3 ಅವರು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಮುರಿದು ಹಾಕಿದ್ದಾರೆ. ಅವರು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾರೆ. ತನ್ನ ಸುತ್ತಲೂ ಇರುವವರನ್ನು ದಹಿಸುವ ಬೆಂಕಿಯಂತೆ, ಅವರು ಯಾಕೋಬನಿಗೆ ವಿರುದ್ಧವಾಗಿ ದಹಿಸಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು, ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ, ಸುತ್ತಮುತ್ತಲು ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಶತ್ರು ಬಂದೆರಗಿದಾಗ ಸ್ವಾಮಿ ತನ್ನ ಶಕ್ತಿಯುತ ಕೈಯನ್ನು ಹಿಂದೆಗೆದುಬಿಟ್ಟ, ಇಸ್ರಯೇಲಿನ ಕೋಡನ್ನು ಕಡಿದು ಪುಡಿಪುಡಿ ಮಾಡಿಬಿಟ್ಟ, ಸುತ್ತುಗಟ್ಟಿ ನುಂಗುವ ಅಗ್ನಿಜ್ವಾಲೆಯಂತೆ ಯಕೋಬನನ್ನು ದಹಿಸಿಬಿಟ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ ಸುತ್ತುಮುತ್ತಲೂ ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿ ಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನ ಕೋಪದ ಭರದಲ್ಲಿ ಯೆಹೋವನು ಇಸ್ರೇಲಿನ ಶಕ್ತಿಯನ್ನೆಲ್ಲ ಕತ್ತರಿಸಿಹಾಕಿದನು. ಆತನು ಇಸ್ರೇಲಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡನು. ಶತ್ರು ಬಂದಾಗ ಆತನು ಹೀಗೆ ಮಾಡಿದನು. ಅಗ್ನಿಜ್ವಾಲೆಗಳಂತೆ ಆತನು ಯಾಕೋಬಿನಲ್ಲಿ ಉರಿದನು. ಸುತ್ತಮುತ್ತಲೆಲ್ಲ (ಪ್ರತಿಯೊಂದನ್ನೂ) ದಹಿಸುವ ಬೆಂಕಿಯಂತೆ ಆತನಿದ್ದನು. ಅಧ್ಯಾಯವನ್ನು ನೋಡಿ |