Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:5 - ಕನ್ನಡ ಸಮಕಾಲಿಕ ಅನುವಾದ

5 ಕರ್ತದೇವರು ಶತ್ರುವಿನಂತೆ ಆಗಿ, ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾರೆ. ಕರ್ತದೇವರು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾರೆ. ಯೆಹೂದದ ದುಃಖವನ್ನೂ, ಪ್ರಲಾಪವನ್ನೂ ಹೆಚ್ಚಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಅರಿಚಾಟಕಿರಿಚಾಟವನ್ನು ಹೆಚ್ಚಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:5
17 ತಿಳಿವುಗಳ ಹೋಲಿಕೆ  

ಕರ್ತದೇವರು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾರೆ. ಯೆಹೂದದ ಪುತ್ರಿಯ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿ ಹಾಕಿದ್ದಾರೆ. ಅವರು ಅವುಗಳನ್ನು ನೆಲಸಮ ಮಾಡಿದ್ದಾರೆ. ಅವರು ಆಕೆಯ ರಾಜ್ಯವನ್ನೂ, ಪ್ರಭುಗಳನ್ನೂ ಅಗೌರವಿಸಿ ನೆಲಕ್ಕೆ ದಬ್ಬಿದ್ದಾರೆ.


ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವುದಿಲ್ಲ. ನಿನ್ನ ಅಕ್ರಮಗಳು ಬಹಳವೂ, ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ ಶತ್ರುವಿನ ಗಾಯದಿಂದಲೂ, ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ;


ಅವರು ಶತ್ರುವಿನ ಹಾಗೆಯೇ ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ. ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು, ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾರೆ. ಅವರು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಪುತ್ರಿಯ ಡೇರೆಯಲ್ಲಿ ಸುರಿದಿದ್ದಾರೆ.


ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ಏಕೆ ನಿಮ್ಮ ಮುಖವನ್ನು ಮರೆಮಾಡುತ್ತೀರಿ? ನನ್ನನ್ನು ನಿಮ್ಮ ಶತ್ರುವಿನ ಹಾಗೆ ಏಕೆ ಭಾವಿಸುತ್ತೀರಿ?


ಅವನ ಗೋಡೆಗಳನ್ನೆಲ್ಲಾ ಮುರಿದು, ಅವನ ಕೋಟೆಗಳನ್ನು ಹಾಳುಮಾಡಲು ಅನುಮತಿಸಿದ್ದೀರಿ.


ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ, ದುಃಖವೂ ಇರುವುದು. ಅವಳು ನನಗೆ ಬಲಿಪೀಠದ ಒಲೆಯಂತೆ ಇರುತ್ತಾಳೆ.


‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬಿಲೋನಿನ ಅರಸನಿಗೂ, ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವುದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನೂ, ನಾನು ಹಿಂದಕ್ಕೆ ತಳ್ಳಿ, ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿಬರುವಂತೆ ಮಾಡುವೆನು.


ಸಮುಯೇಲನು ಅವನಿಗೆ, “ಯೆಹೋವ ದೇವರು ನಿನ್ನನ್ನು ಬಿಟ್ಟು ಹೋಗಿ ನಿನಗೆ ಶತ್ರುವಾಗಿರುವಾಗ, ನೀನು ನನ್ನನ್ನು ಕೇಳುವುದು ಏಕೆ?


ದೇವರ ಶಿಕ್ಷೆಯು ನನ್ನ ಮೇಲೆ ಉರಿಯುತ್ತಿದೆ; ನಾನು ದೇವರಿಗೆ ವೈರಿಯಂತೆ ಪರಿಗಣಿಸಲಾಗಿದ್ದೇನೆ.


ದಾರಿಯಲ್ಲಿ ಹೋಗುವವರು ಅವನನ್ನು ಕೊಳ್ಳೆ ಹೊಡೆಯುತ್ತಾರೆ. ತನ್ನ ನೆರೆಯವರಿಗೆ ಅವನು ನಿಂದೆಯಾಗಿದ್ದಾನೆ.


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು