Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:6 - ಕನ್ನಡ ಸಮಕಾಲಿಕ ಅನುವಾದ

6 ಅವರು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾರೆ. ಅವರು ತನ್ನ ಸಭಾ ಸ್ಥಾನಗಳನ್ನು ನಾಶಮಾಡಿದ್ದಾರೆ. ಯೆಹೋವ ದೇವರು ಚೀಯೋನಿಗೆ ಪವಿತ್ರ ಹಬ್ಬಗಳನ್ನೂ, ಸಬ್ಬತ್ ದಿನಗಳನ್ನೂ ಮರೆತುಬಿಡುವಂತೆ ಮಾಡಿದ್ದಾರೆ. ತನ್ನ ಕೋಪದ ಉರಿಯಲ್ಲಿ ಅರಸನನ್ನೂ, ಯಾಜಕನನ್ನೂ ತುಚ್ಛೀಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಮತ್ತು ಯಾಜಕರನ್ನೂ ಧಿಕ್ಕರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತನ್ನ ಗರ್ಭಗುಡಿಯನ್ನೂ ಉತ್ಸವಸ್ಥಾನವನ್ನೂ ಹಾಳುಮಾಡಿದ ತೋಟದ ಗುಡಿಸಲನ್ನೋ ಎಂಬಂತೆ. ಮಹೋತ್ಸವಗಳನ್ನೂ ಸಬ್ಬತ್‍ದಿನಗಳನ್ನೂ ಅಳಿಸಿಬಿಟ್ಟ ನೆನಪಿಗೂ ಬಾರದಂತೆ. ರಾಜರನ್ನೂ ಯಾಜಕರನ್ನೂ ಸರ್ವೇಶ್ವರ ಧಿಕ್ಕರಿಸಿದ ಅತಿ ರೋಷಾವೇಷಗೊಂಡವನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಯಾಜಕನನ್ನೂ ಧಿಕ್ಕರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:6
25 ತಿಳಿವುಗಳ ಹೋಲಿಕೆ  

“ನೇಮಕವಾದ ಹಬ್ಬಗಳ ನಷ್ಟಕ್ಕಾಗಿರುವ ನಿಮ್ಮ ದುಃಖವನ್ನು ನಿಮ್ಮಿಂದ ನಾನು ತೆಗೆದುಬಿಡುವೆನು. ಅವು ನಿನಗೆ ಭಾರವಾಗಿಯೂ ನಿಂದೆಯಾಗಿಯೂ ಇದ್ದವು.


ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ.


ಯೆಹೋವ ದೇವರ ಕೋಪವು ಅವರನ್ನು ಚದುರಿಸಿತು. ಅವರು ಇನ್ನು ಅವರನ್ನು ಲಕ್ಷಿಸುವುದಿಲ್ಲ. ಅವರು ಯಾಜಕರನ್ನು ಗೌರವಿಸಲಿಲ್ಲ. ಅವರು ಹಿರಿಯರಿಗೆ ದಯೆ ತೋರಿಸಲಿಲ್ಲ.


“ಆದ್ದರಿಂದ ನೀವು ನನ್ನ ಮಾರ್ಗಗಳನ್ನು ಕೈಗೊಳ್ಳದೆ, ನನ್ನ ನಿಯಮವನ್ನು ಬೋಧಿಸುವಾಗ ಮುಖದಾಕ್ಷಿಣ್ಯ ಮಾಡಿದ ಪ್ರಕಾರವೇ, ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆಯಾದವರನ್ನಾಗಿಯೂ, ನೀಚರನ್ನಾಗಿಯೂ ಮಾಡುವೆನು.”


ಅವನು ಒಡಂಬಡಿಕೆಯನ್ನು ಮುರಿದು, ಪ್ರಮಾಣ ವಚನವನ್ನು ತಿರಸ್ಕರಿಸಿದನು. ಅವನು ಒಡಂಬಡಿಕೆಯಲ್ಲಿ ತನ್ನ ಹಸ್ತವನ್ನಿಟ್ಟಿದ್ದರೂ ಈ ಎಲ್ಲಾ ಸಂಗತಿಗಳನ್ನು ಮಾಡಿದ್ದರಿಂದ ಅವನು ತಪ್ಪಿಸಿಕೊಳ್ಳಲಾರನು.


ರಾಜಕುಮಾರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ. ಹಿರಿಯರಿಗೆ ಗೌರವವಿಲ್ಲ.


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಶೃಂಗಾರವಾದ ದೇವಾಲಯ ಬೆಂಕಿಯಿಂದ ಸುಟ್ಟುಹೋಯಿತು. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾದವು.


ಸ್ವಲ್ಪಕಾಲ ಮಾತ್ರ ನಿಮ್ಮ ಪರಿಶುದ್ಧ ಜನರು ಅದನ್ನು ಸ್ವಾಧೀನಮಾಡಿಕೊಂಡರು. ನಮ್ಮ ಶತ್ರುಗಳು ನಿಮ್ಮ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.


ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.


ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.


ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು.


ಚೀಯೋನ್ ಪುತ್ರಿಯು ದ್ರಾಕ್ಷಿ ತೋಟದಲ್ಲಿರುವ ಮನೆಯ ಹಾಗೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಿರುವ ಪಟ್ಟಣದ ಹಾಗೆಯೂ ಇದೆ.


ಅವನ ಗೋಡೆಗಳನ್ನೆಲ್ಲಾ ಮುರಿದು, ಅವನ ಕೋಟೆಗಳನ್ನು ಹಾಳುಮಾಡಲು ಅನುಮತಿಸಿದ್ದೀರಿ.


ಮಾರ್ಗದಲ್ಲಿ ಹಾದುಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಏಕೆ ಅದರ ಬೇಲಿಗಳನ್ನು ನೀವು ಮುರಿದುಬಿಟ್ಟಿದ್ದೀರಿ?


ಸಾಲೇಮಿನಲ್ಲಿ ದೇವರ ಗುಡಾರವೂ ಚೀಯೋನಿನಲ್ಲಿ ಅವರ ವಾಸಸ್ಥಾನವೂ ಉಂಟು.


ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”


ಅವರು ಚೀಯೋನಿನಲ್ಲಿ ನಮ್ಮ ದೇವರಾದ ಯೆಹೋವ ದೇವರ ಪ್ರತಿದಂಡನೆಯನ್ನೂ, ಆತನ ಆಲಯದ ಪ್ರತಿದಂಡನೆಯನ್ನೂ ತಿಳಿಸುತ್ತಾ, ಬಾಬಿಲೋನಿನ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುವವರ ಸ್ವರವನ್ನು ಕೇಳಿರಿ.


ನಿಮ್ಮ ಪಟ್ಟಣಗಳನ್ನು ನಾನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಸುವಾಸನೆಗಳನ್ನು ಮೂಸಿ ನೋಡದೆ ಇರುವೆನು.


ನಿಮ್ಮ ಪರಿಶುದ್ಧ ಸ್ಥಳಕ್ಕೆ ಬೆಂಕಿಹಚ್ಚಿದ್ದಾರೆ. ನಿಮ್ಮ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಅಪವಿತ್ರಗೊಳಿಸಿದ್ದಾರೆ.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’


ಆದರೆ ನಿಮಗೆ ಹೇಳಲು ಯೆಹೋವ ದೇವರು ನನಗೆ ಹೇಳಿದ್ದಾರೆ. ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ. ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು