Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:15 - ಕನ್ನಡ ಸಮಕಾಲಿಕ ಅನುವಾದ

15 ಅವರು ನನ್ನನ್ನು ಕಹಿಯಿಂದ ತುಂಬಿಸಿ, ವಿಷ ಸಸ್ಯಗಳಿಂದ ನನ್ನನ್ನು ತಣಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆತ ನನಗೆ ಕಹಿ ಉಣ್ಣಿಸಿದ್ದಾನೆ ಹೊಟ್ಟೆತುಂಬ ನನ್ನನ್ನು ತಣಿಸಿದ್ದಾನೆ ವಿಷಪದಾರ್ಥಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆತನು ನನಗೆ ಕಹಿಯಾದ ಆಹಾರವನ್ನು ಅಡಚಿ ವಿಷಪದಾರ್ಥದಿಂದ ನನ್ನನ್ನು ತಣಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಷೆಯನ್ನು) ಕೊಟ್ಟನು. ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:15
12 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರಿಗೆ ಹೌದು, ಈ ಜನರಿಗೆ ಮಾಚಿಪತ್ರೆಯನ್ನು ತಿನ್ನುವುದಕ್ಕೆ ಕೊಡುತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡುತ್ತೇನೆ.


ನನ್ನ ಸಂಕಟವನ್ನು, ನನ್ನ ಅಲೆದಾಡುವಿಕೆಯನ್ನು, ನನ್ನ ಕಹಿಯನ್ನು, ನನ್ನ ವಿಷತನವನ್ನು ನಾನು ಜ್ಞಾಪಕಮಾಡಿಕೊಂಡಿದ್ದೇನೆ.


“ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”


ನಿಮ್ಮ ಜನರಿಗೆ ಕಠಿಣ ಕಾಲಗಳನ್ನು ನೀವು ತೋರಿಸಿದ್ದೀರಿ. ನಾವು ಭ್ರಮಣಗೊಳಿಸುವ ದ್ರಾಕ್ಷಾರಸವನ್ನು ಕುಡಿದವರಂತೆ ಆದೆವು.


ನಾನು ಉಸಿರಾಡಲು ಕಷ್ಟಪಡುತ್ತಿದ್ದೇನೆ, ದೇವರು ಕಹಿಯಾದವುಗಳಿಂದ ನನ್ನನ್ನು ತುಂಬಿಸುತ್ತಾರೆ.


ಆಗ ಆಕೆಯು ಅವರಿಗೆ, “ನನ್ನನ್ನು ‘ನೊವೊಮಿ’ ಎಂದು ಕರೆಯಬೇಡಿರಿ. ಮಾರಾ ಎಂದು ಕರೆಯಿರಿ ಏಕೆಂದರೆ ಸರ್ವಶಕ್ತರು ನನ್ನನ್ನು ಬಹು ದುಃಖದಿಂದ ನಡೆಸಿದರು.


ಸಮಾಧಿ ಸೇರುವವರ ಸಂಗಡ ಎಣಿಸಲಾಗಿದ್ದೇನೆ; ನಾನು ಬಲವಿಲ್ಲದ ಪುರುಷನ ಹಾಗಿದ್ದೇನೆ.


“ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”


ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ, ತಮ್ಮ ಪಿತೃಗಳು ಅವರಿಗೆ ಬೋಧಿಸಿದ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು