ಪ್ರಲಾಪಗಳು 3:25 - ಕನ್ನಡ ಸಮಕಾಲಿಕ ಅನುವಾದ25 ಆತನನ್ನು ನಿರೀಕ್ಷಿಸುವವರಿಗೂ, ಆತನನ್ನು ಹುಡಕುವವರಿಗೂ ಯೆಹೋವ ದೇವರು ಒಳ್ಳೆಯವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸರ್ವೇಶ್ವರ ಒಳ್ಳೆಯವನು ಆತನನ್ನು ನಿರೀಕ್ಷಿಸುವವರಿಗೆ ಆತನನ್ನು ಹರಸಿ ಹಂಬಲಿಸುವ ಜನರಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋವನು ತನಗಾಗಿ ಕಾಯುವ ಜನರಿಗೆ ಒಳ್ಳೆಯವನಾಗಿರುತ್ತಾನೆ. ಯೆಹೋವನು ತನ್ನನ್ನು ಎದುರುನೋಡುವ ಜನರಿಗೆ ಒಳ್ಳೆಯವನಾಗಿರುತ್ತಾನೆ. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.