ಪ್ರಲಾಪಗಳು 3:7 - ಕನ್ನಡ ಸಮಕಾಲಿಕ ಅನುವಾದ7 ನಾನು ಹೊರಗೆ ಬಾರದ ಹಾಗೆ, ಅವರು ನನ್ನ ಸುತ್ತಲೂ ಗೋಡೆಯನ್ನು ಕಟ್ಟಿದ್ದಾರೆ. ಅವರು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ತಪ್ಪಿಸಿಕೊಂಡು ಹೋಗದಂತೆ ನನ್ನ ಸುತ್ತಲು ಗೋಡೆಯನ್ನು ಕಟ್ಟಿ, ನನಗೆ ಭಾರವಾದ ಬೇಡಿಯನ್ನು ಹಾಕಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ಹೊರಗಡೆ ಹೋಗದಂತೆ ಗೋಡೆಯೆಬ್ಬಿಸಿರುವನು, ಭಾರವಾದ ಬೇಡಿಗಳನ್ನು ನನಗೆ ತೊಡಿಸಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ಆಚೆಹೋಗದಂತೆ ನನ್ನ ಸುತ್ತಲು ಗೋಡೆ ಕಟ್ಟಿ ನನಗೆ ಭಾರಿ ಬೇಡಿಹಾಕಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನು ನನ್ನನ್ನು ಬಂಧಿಸಿ ನಾನು ಹೊರಗೆ ಬರಲಾಗದಂತೆ ಮಾಡಿದನು. ಆತನು ನನ್ನನ್ನು ಬಲವಾದ ಸರಪಣಿಗಳಿಂದ ಕಟ್ಟಿ ಹಾಕಿದನು. ಅಧ್ಯಾಯವನ್ನು ನೋಡಿ |
ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.