Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:11 - ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸುರಿಸಿದ್ದಾನೆ ಸರ್ವೇಶ್ವರ ತನ್ನ ರೋಷಾಗ್ನಿಯನ್ನು ತೀರಿಸಿಕೊಂಡಿದ್ದಾನೆ ತನ್ನ ಉಗ್ರಕೋಪವನ್ನು. ಆತ ಹೊತ್ತಿಸಿದ ಬೆಂಕಿಗೆ ಸಿಯೋನಿನ ಅಸ್ತಿವಾರ ಆಹುತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ತನ್ನ ಕೋಪವನ್ನೆಲ್ಲ ಉಪಯೋಗಿಸಿದನು; ತನ್ನ ಕೋಪವನ್ನೆಲ್ಲಾ ಸುರಿದುಬಿಟ್ಟನು. ಆತನು ಚೀಯೋನಿನಲ್ಲಿ ಬೆಂಕಿ ಹೊತ್ತಿಸಿದನು. ಆ ಬೆಂಕಿಯು ಚೀಯೋನಿನ ಅಡಿಪಾಯಗಳವರೆಗೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:11
29 ತಿಳಿವುಗಳ ಹೋಲಿಕೆ  

ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.


ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.


ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”


ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವವುಗಳೆಲ್ಲವೂ ನೆರವೇರಲು, ಇವು ದಂಡನೆಯ ದಿವಸಗಳಾಗಿವೆ.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.


ಚೀಯೋನ್ ಪುತ್ರಿಯೇ, ನಿನ್ನ ಅಕ್ರಮದ ಶಿಕ್ಷೆಯು ತೀರಿ ಹೋಯಿತು. ಅವರು ಇನ್ನು ಮೇಲೆ ನಿನ್ನ ಗಡಿಪಾರನ್ನು ಹೆಚ್ಚಿಸುವುದಿಲ್ಲ. ಎದೋಮಿನ ಪುತ್ರಿಯೇ, ಅವರು ನಿನ್ನ ಅಕ್ರಮವನ್ನು ವಿಚಾರಿಸುವನು. ಆತನು ನಿನ್ನ ಪಾಪಗಳನ್ನು ಬಹಿರಂಗಪಡಿಸುವರು.


ಯೆಹೋವ ದೇವರು ಚೀಯೋನಿನ ಗೋಡೆಯನ್ನು ನಾಶಮಾಡಬೇಕೆಂದು ಉದ್ದೇಶಿಸಿದ್ದಾರೆ. ಅಳತೆಯ ಗೆರೆಯನ್ನು ಎಳೆದಿದ್ದಾರೆ. ತನ್ನ ಕೈಯನ್ನು ಕೆಡಿಸುವುದರಿಂದ ಹಿಂದೆಗೆಯಲಿಲ್ಲ. ಆದ್ದರಿಂದ ಕಲ್ಲಿನ ಪ್ರಾಕಾರವನ್ನು ಮತ್ತು ಗೋಡೆಯನ್ನು ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.


ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸುತ್ತೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’ ”


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.”


ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು. ಹತ್ತಿರದಲ್ಲಿರುವವನು ಖಡ್ಗದಿಂದ ಬೀಳುವನು. ಉಳಿದ ಮುತ್ತಿಗೆಯಲ್ಲಿರುವವನು ಕ್ಷಾಮದಿಂದ ಸಾಯುವನು. ಹೀಗೆ ನಾನು ಅವರ ಮೇಲೆ ನನ್ನ ರೋಷವನ್ನು ತೀರಿಸಿಕೊಳ್ಳುವೆನು.


ಆದ್ದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷವನ್ನು ಅವರ ಮೇಲೆ ಸುರಿಸಿದೆನು.


ತೀರ್ಪು ಕಾರ್ಯಗತಗೊಳ್ಳುವ ಮುಂಚೆ ಮತ್ತು ಆ ದಿನವು ಗಾಳಿ ಬೀಸಿದ ಹೊಟ್ಟಿನಂತೆ ಹಾರಿಹೋಗುವುದಕ್ಕಿಂತ ಮುಂಚೆ ಯೆಹೋವ ದೇವರ ಉಗ್ರಕೋಪವು ನಿಮ್ಮ ಮೇಲೆ ಬರುವ ಮುಂಚೆ, ಯೆಹೋವ ದೇವರ ಕೋಪದ ದಿನವು ನಿಮ್ಮ ಮೇಲೆ ಬರುವ ಮುಂಚೆ,


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


ನಿನ್ನ ಪುತ್ರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ, ಎಲ್ಲಾ ಬೀದಿಗಳು ಕೂಡುವ ಚೌಕಗಳಲ್ಲಿ ಅವರು ಬಿದ್ದಿದ್ದಾರೆ. ಅವರು ಯೆಹೋವ ದೇವರ ರೋಷದಿಂದಲೂ, ನಿನ್ನ ದೇವರ ಗದರಿಕೆಯಿಂದಲೂ ತುಂಬಿದ್ದಾರೆ.


ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.


ಅವರು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಮುರಿದು ಹಾಕಿದ್ದಾರೆ. ಅವರು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾರೆ. ತನ್ನ ಸುತ್ತಲೂ ಇರುವವರನ್ನು ದಹಿಸುವ ಬೆಂಕಿಯಂತೆ, ಅವರು ಯಾಕೋಬನಿಗೆ ವಿರುದ್ಧವಾಗಿ ದಹಿಸಿಬಿಟ್ಟಿದ್ದಾರೆ.


ಅವರು ಶತ್ರುವಿನ ಹಾಗೆಯೇ ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ. ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು, ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾರೆ. ಅವರು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಪುತ್ರಿಯ ಡೇರೆಯಲ್ಲಿ ಸುರಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು