Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:18 - ಕನ್ನಡ ಸಮಕಾಲಿಕ ಅನುವಾದ

18 ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಶತ್ರುಗಳು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ. ನಮ್ಮ ಅಂತ್ಯವು ಸಮೀಪಿಸಿತು, ನಮ್ಮ ದಿನಗಳು ತೀರಿದವು. ಏಕೆಂದರೆ ನಮ್ಮ ಅಂತ್ಯವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಶತ್ರು ನಮ್ಮನ್ನು ಹೆಜ್ಜೆಹೆಜ್ಜೆಗೂ ಹುಡುಕುತ್ತಿದ್ದುದರಿಂದ ಹಾದಿಬೀದಿಗಳಲ್ಲಿ ಸಂಚಾರಮಾಡಲೂ ಆಗುತ್ತಿರಲಿಲ್ಲ. ನಮಗೆ ಕಾಲವು ತೀರಿತು, ಅಂತ್ಯವು ಸಮೀಪಿಸಿತು; ಹೌದು, ನಮ್ಮ ಅಂತ್ಯವು ಬಂದೇಬಿಟ್ಟಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿ ಮಾಡಿಕೊಂಡಿರುವದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು, ಹೌದು, ನಮಗೆ ಅಂತ್ಯವು ಬಂದೇ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಮ್ಮ ವೈರಿಗಳು ನಮ್ಮನ್ನು ಸತತವಾಗಿ ಬೇಟೆಯಾಡುತ್ತಿದ್ದುದರಿಂದ ನಾವು ಬೀದಿಗಳಿಗೆ ಹೋಗಲೂ ಸಾಧ್ಯವಾಗಲಿಲ್ಲ. ನಮ್ಮ ಅಂತ್ಯವು ಸಮೀಪಿಸಿತು. ನಮ್ಮ ಕಾಲವು ಮುಗಿಯಿತು; ನಮ್ಮ ಕೊನೆಯು ಬಂದಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:18
16 ತಿಳಿವುಗಳ ಹೋಲಿಕೆ  

ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.


ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.


“ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು.


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು, ‘ಇವನಿಗಾದ ದರ್ಶನವು ಬಹುದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆ,’ ಎಂದು ಹೇಳುತ್ತಾರೆ.”


ಏಕೆಂದರೆ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: “ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬಿಲೋನಿನ ಮಗಳು ಇದ್ದಾಳೆ. ಇನ್ನು ಸ್ವಲ್ಪ ಕಾಲವಾದ ಮೇಲೆ ಅವಳಿಗೆ ಸುಗ್ಗಿಕಾಲ ಬರುವುದು.”


ಆಗ ಯೆಹೋವ ದೇವರು ನನಗೆ, “ನೀನು ಚೆನ್ನಾಗಿ ನೋಡಿದ್ದೀ. ಏಕೆಂದರೆ ನನ್ನ ವಾಕ್ಯವನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆಂದು, ತಿಳಿದುಕೊ” ಎಂದರು.


ಚಾಡಿಕೋರರು ದೇಶದಲ್ಲಿ ಉಳಿಯದಿರಲಿ; ಬಲಾತ್ಕಾರಿಯನ್ನು ಕೇಡು ಬೇಟೆಯಾಡಿ ಕೆಡವಲಿ.


ನಾನು ತಲೆಯೆತ್ತಿದರೆ, ಸಿಂಹದಂತೆ ನನ್ನನ್ನು ಬೇಟೆಯಾಡುತ್ತೀರಿ; ನನ್ನ ವಿರುದ್ಧ ನಿಮ್ಮ ಅದ್ಭುತ ಶಕ್ತಿಯನ್ನು ಪ್ರದರ್ಶಿಸುವಿರಿ.


“ಇಸ್ರಾಯೇಲಿನ ಅರಸನು ಯಾರನ್ನು ಹಿಂದಟ್ಟಿ ಹೊರಟನು? ಯಾರನ್ನು ಹಿಂದಟ್ಟುತ್ತೀ? ಸತ್ತ ನಾಯಿಯನ್ನೇ? ಒಂದು ನೊಣವನ್ನೇ?


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಆಗ ಅವನು ಬೆನ್ಯಾಮೀನನ ಬಾಗಿಲಲ್ಲಿ ಇರುವಾಗ, ಅಲ್ಲಿ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನಾದ ಇರೀಯನೆಂಬ ಪಹರೆಯ ನಾಯಕನು ಇದ್ದನು. ಇವನು ಪ್ರವಾದಿಯಾದ ಯೆರೆಮೀಯನನ್ನು, “ನೀನು ಕಸ್ದೀಯರ ಪಕ್ಷಕ್ಕೆ ಸೇರುತ್ತೀ,” ಎಂದು ಹೇಳಿ ಹಿಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು