Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:20 - ಕನ್ನಡ ಸಮಕಾಲಿಕ ಅನುವಾದ

20 ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:20
27 ತಿಳಿವುಗಳ ಹೋಲಿಕೆ  

ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.


ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.


ಆಗ ಚೆರೂಯಳ ಮಗ ಅಬೀಷೈಯನು ಉತ್ತರವಾಗಿ, “ಯೆಹೋವ ದೇವರ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ, ಅದಕ್ಕಾಗಿ ಅವನಿಗೆ ಮರಣದಂಡನೆ ಆಗಬೇಕಲ್ಲವೆ?” ಎಂದನು.


ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.


ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ. ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಅವಳ ಪ್ರಭುಗಳು ಇತರ ಜನಾಂಗಗಳ ಮಧ್ಯೆ ಇರುವರು. ಇನ್ನು ದೈವನಿಯಮವು ನಿಂತುಹೋಗಿವೆ. ಆಕೆಯ ಪ್ರವಾದಿಗಳು ಸಹ ಯೆಹೋವ ದೇವರಿಂದ ದರ್ಶನವನ್ನು ಕಂಡುಕೊಳ್ಳುವುದಿಲ್ಲ.


“ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಬೀಳದೆ ಇರಲಿ, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಯೂ ಅವಮಾನಗೊಂಡು ಬಿದ್ದವು. ಸೌಲನ ಗುರಾಣಿಯೂ ಎಣ್ಣೆಯಿಂದ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆಯಿತು.


ಆಗ ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈ ಎತ್ತುವುದಕ್ಕೆ ಯಾಕೆ ಭಯಪಡಲಿಲ್ಲ?” ಎಂದು ಕೇಳಿದನು.


ಅವನು ಒಡಂಬಡಿಕೆಯನ್ನು ಮುರಿದು, ಪ್ರಮಾಣ ವಚನವನ್ನು ತಿರಸ್ಕರಿಸಿದನು. ಅವನು ಒಡಂಬಡಿಕೆಯಲ್ಲಿ ತನ್ನ ಹಸ್ತವನ್ನಿಟ್ಟಿದ್ದರೂ ಈ ಎಲ್ಲಾ ಸಂಗತಿಗಳನ್ನು ಮಾಡಿದ್ದರಿಂದ ಅವನು ತಪ್ಪಿಸಿಕೊಳ್ಳಲಾರನು.


ಆಗ ಬಾಬಿಲೋನಿಯರ ದಂಡು ಅರಸನಾದ ಚಿದ್ಕೀಯನನ್ನು ಯೆರಿಕೋವಿನ ಬಯಲಿನಲ್ಲಿ ಹಿಂದಟ್ಟಿದರು; ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.


ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು.


ನೀನು ಮಾಡಿದ ಈ ಕಾರ್ಯ ಒಳ್ಳೆಯದಲ್ಲ. ಯೆಹೋವ ದೇವರ ಜೀವದಾಣೆ, ಯೆಹೋವ ದೇವರ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದ್ದರಿಂದ, ನೀವು ಮರಣಕ್ಕೆ ಯೋಗ್ಯರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ, ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು,” ಎಂದನು.


ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು.


ಯೆಹೋವ ದೇವರು ಈ ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರೆಂಬುದನ್ನು ಈ ದಿನ ನಿನ್ನ ಕಣ್ಣುಗಳು ಕಂಡವು. ಕೆಲವರು ನಿನ್ನನ್ನು ಕೊಂದುಹಾಕಲು ನನಗೆ ಒತ್ತಾಯಮಾಡಿದರು. ಆದರೆ ನಾನು ಅವರಿಗೆ, ‘ಅರಸನು ಯೆಹೋವ ದೇವರ ಅಭಿಷಿಕ್ತನು. ಆದುದರಿಂದ ನಾನು ನನ್ನ ಒಡೆಯನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆ.


ದಾವೀದನು ತನ್ನ ಜನರಿಗೆ, “ಅವನು ಯೆಹೋವ ದೇವರ ಅಭಿಷಿಕ್ತನಾದದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ, ನನ್ನ ಒಡೆಯನಿಗೆ ಈ ಕಾರ್ಯ ಮಾಡುವುದನ್ನು ಯೆಹೋವ ದೇವರು ತಡೆಯಲಿ,” ಎಂದನು.


ಅವರು ಬಂದಾಗ, ಅವನು ಎಲೀಯಾಬನನ್ನು ಕಂಡು, “ನಿಶ್ಚಯವಾಗಿ ಯೆಹೋವ ದೇವರ ಅಭಿಷಿಕ್ತನು ಅವರ ಮುಂದೆ ಇದ್ದಾನೆ,” ಎಂದುಕೊಂಡನು.


ಆಗ ಅವನು ಅವರಿಗೆ, “ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬುದಕ್ಕೆ ಯೆಹೋವ ದೇವರೇ ನಿಮಗೆ ಸಾಕ್ಷಿಯಾಗಿದ್ದಾರೆ. ಅವರ ಅಭಿಷಿಕ್ತನು ಈ ಹೊತ್ತು ಸಾಕ್ಷಿಯಾಗಿದ್ದಾನೆ,” ಎಂದನು. ಅದಕ್ಕವರು, “ಸಾಕ್ಷಿಯಾಗಿದ್ದಾರೆ,” ಎಂದರು.


ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.


“ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದಲ್ಲಿ ನೆಟ್ಟಿದ್ದರಿಂದ,


ಯೆರೆಮೀಯನು ಯೋಷೀಯನಿಗೋಸ್ಕರ ದುಃಖ ಗೀತವನ್ನು ಬರೆದನು. ಹಾಡುಗಾರರೂ, ಹಾಡುಗಾರ್ತಿಯರೂ ಯೋಷೀಯನನ್ನು ಇದುವರೆಗೂ ತಮ್ಮ ಗೋಳಾಟ ಪದ್ಯಗಳಲ್ಲಿ ಸ್ಮರಿಸಿಕೊಳ್ಳುತ್ತಾರೆ. ಇದು ಇಸ್ರಾಯೇಲಿನಲ್ಲಿ ಸಂಪ್ರದಾಯವಾಯಿತು ಮತ್ತು ಈ ಗೀತೆಗಳು ಪ್ರಲಾಪಗಳಲ್ಲಿ ಬರೆದಿರುತ್ತವೆ.


ಅನಂತರ ಬಾಬಿಲೋನಿಯರು ಚಿದ್ಕೀಯನನ್ನು ಹಿಡಿದರು. ಅವನನ್ನು ಹಮಾತ್ ನಾಡಿನ ರಿಬ್ಲದಲ್ಲಿರುವ ತಮ್ಮ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.


ಅದರ ಎಲೆಗಳು ಅಂದವಾಗಿದ್ದವು. ಅದರ ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರವಿತ್ತು. ಕಾಡುಮೃಗಗಳಿಗೆ ಅದರ ಕೆಳಗೆ ನೆರಳಲ್ಲಿ ಆಶ್ರಯ ದೊರಕುತ್ತಿತ್ತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು. ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ದೊರಕುತ್ತಿತ್ತು.


“ಮುಳ್ಳಿನ ಗಿಡವು ಮರಗಳಿಗೆ, ‘ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವುದು ಸತ್ಯವಾದರೆ, ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು, ಲೆಬನೋನಿನ ದೇವದಾರುಗಳು ದಹಿಸಿಬಿಡಲಿ,’ ಎಂದಿತು.


ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.


ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು.


ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜ್ಯವನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ. ಆ ನ್ಯಾಯಾಧಿಪತಿಗಳು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು