ಪ್ರಲಾಪಗಳು 4:21 - ಕನ್ನಡ ಸಮಕಾಲಿಕ ಅನುವಾದ21 ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಯುವತಿಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ [ರೋಷಪಾನದ] ಪಾತ್ರೆಯು ನಿನ್ನ ಪಾಲಿಗೂ ಬರುವದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿ |