ಪ್ರಲಾಪಗಳು 4:22 - ಕನ್ನಡ ಸಮಕಾಲಿಕ ಅನುವಾದ22 ಚೀಯೋನ್ ಪುತ್ರಿಯೇ, ನಿನ್ನ ಅಕ್ರಮದ ಶಿಕ್ಷೆಯು ತೀರಿ ಹೋಯಿತು. ಅವರು ಇನ್ನು ಮೇಲೆ ನಿನ್ನ ಗಡಿಪಾರನ್ನು ಹೆಚ್ಚಿಸುವುದಿಲ್ಲ. ಎದೋಮಿನ ಪುತ್ರಿಯೇ, ಅವರು ನಿನ್ನ ಅಕ್ರಮವನ್ನು ವಿಚಾರಿಸುವನು. ಆತನು ನಿನ್ನ ಪಾಪಗಳನ್ನು ಬಹಿರಂಗಪಡಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ‘ಸಿಯೋನ್’ ನಾರಿಮಣಿಯೇ, ನಿನ್ನ ದೋಷದ ಫಲವನ್ನು ಅನುಭವಿಸಿ ಆಗಿದೆ. ಸರ್ವೇಶ್ವರನು ಮತ್ತೆ ಒಯ್ಯನು ನಿನ್ನನ್ನು ಸೆರೆಗೆ. ‘ಎದೋಮ್’ ನಾರಿಮಣಿಯೇ, ನಿನ್ನ ದೋಷದ ನಿಮಿತ್ತ ಸರ್ವೇಶ್ವರನು ನಿನ್ನನ್ನು ದಂಡಿಸುವನು ನಿನ್ನ ಪಾಪಾಕ್ರಮಗಳನ್ನು ಬಯಲಿಗೆ ಎಳೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಚೀಯೋನೆಂಬ ಯುವತಿಯೇ, ನಿನ್ನ ದೋಷಫಲವೆಲ್ಲಾ ಅನುಭವಿಸಿ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು; ಎದೋಮೆಂಬ ಯುವತಿಯೇ, ನಿನ್ನ ದೋಷದ ನಿವಿುತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಚೀಯೋನೇ, ನಿನಗಾಗಬೇಕಿದ್ದ ದಂಡನೆಯು ಸಂಪೂರ್ಣವಾಯಿತು. ಮತ್ತೆ ನೀನು ಸೆರೆವಾಸಕ್ಕೆ ಹೋಗುವುದಿಲ್ಲ. ಆದರೆ ಎದೋಮಿನ ಜನರೇ, ನಿಮ್ಮ ಪಾಪಗಳಿಗಾಗಿ ಯೆಹೋವನು ನಿಮ್ಮನ್ನು ದಂಡಿಸುವನು. ಆತನು ನಿಮ್ಮ ಪಾಪಗಳನ್ನು ಬಹಿರಂಗಪಡಿಸುವನು. ಅಧ್ಯಾಯವನ್ನು ನೋಡಿ |