Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:3 - ಕನ್ನಡ ಸಮಕಾಲಿಕ ಅನುವಾದ

3 ನರಿಗಳೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಹಾಲು ಕುಡಿಸುತ್ತವೆ. ಆದರೆ ನನ್ನ ಜನರು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮರಿಗಳಿಗೆ ಮೊಲೆಕೊಟ್ಟು ಹಾಲುಣಿಸುತ್ತವೆ ನರಿಗಳು ನನ್ನ ಜನರು ಆಗಿಹರು ಕಾಡಿನ ಉಷ್ಟ್ರಪಕ್ಷಿಯಂತೆ ಕ್ರೂರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಊಡಿಸುವವಷ್ಟೆ; ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕಾಡುನಾಯಿಯು ಸಹ ತನ್ನ ಮರಿಗಳಿಗೆ ಹಾಲನ್ನು ಕುಡಿಸುತ್ತದೆ. ನರಿಯು ಸಹ ತನ್ನ ಮರಿಗಳಿಗೆ ಮೊಲೆಗಳಿಂದ ಹಾಲನ್ನು ಕೊಡುತ್ತದೆ. ಆದರೆ ನನ್ನ ಜನರಾದರೋ, ಮರುಭೂಮಿಯಲ್ಲಿ ಜೀವಿಸುವ ಉಷ್ಟ್ರಪಕ್ಷಿಯಂತೆ ಕ್ರೂರಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:3
14 ತಿಳಿವುಗಳ ಹೋಲಿಕೆ  

ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.


ಕನಿಕರ ತುಂಬಿದ ಸ್ತ್ರೀಯರ ಕೈಗಳು ತಮ್ಮ ಸ್ವಂತ ಮಕ್ಕಳನ್ನೇ ಬೇಯಿಸಿದವು. ಇವರು ನನ್ನ ಜನರ ನಾಶದಲ್ಲಿ ಅವರಿಗೆ ಆಹಾರವಾದರು.


ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?


ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’


ನೀವು ನಿಮ್ಮ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.


ವಿವೇಚನೆಯಿಲ್ಲದವರೂ ನಂಬಿಕೆಯಿಲ್ಲದವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.


“ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಸ್ತ್ರೀ ತನ್ನ ಎದೆಹಾಲನ್ನು ಕುಡಿಯುವ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆಯುವುದಿಲ್ಲ.


ಅವರ ಕೋಣೆಗಳಲ್ಲಿ ತೋಳಗಳು ಕೂಗುವುವು, ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ನರಿಗಳು ವಾಸಿಸುವುವು. ಬಾಬಿಲೋನಿಗೆ ಕಾಲವು ಸಮೀಪಿಸಿತು. ಇನ್ನು ಅದರ ದಿನಗಳು ಮುಂದುವರಿಯುವುದಿಲ್ಲ.


ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವುವು, ಅದರ ಕೋಟೆಗಳಲ್ಲಿ ಮುಳ್ಳುಪೊದೆಗಳು ಇರುವುವು. ಅದು ನರಿಗಳ ನಿವಾಸವೂ, ಗೂಬೆಗಳಿಗೆ ಸ್ಥಾನವೂ ಆಗುವುದು.


ಉದಯದಲ್ಲಿ ನನ್ನ ಕೂಸಿಗೆ ಹಾಲು ಕುಡಿಸಲು ಎದ್ದಾಗ, ಅದು ಸತ್ತಿತ್ತು! ಉದಯದಲ್ಲಿ ಅದನ್ನು ಕಂಡಾಗ, ಅದು ನಾನು ಹೆತ್ತ ಮಗುವಾಗಿರಲಿಲ್ಲ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು