Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:13 - ಕನ್ನಡ ಸಮಕಾಲಿಕ ಅನುವಾದ

13 ಅವರು ಯೌವನಸ್ಥರನ್ನು ಅರೆಯುವುದಕ್ಕೆ ತೆಗೆದುಕೊಂಡರು ಮತ್ತು ಹುಡುಗರು ಕಟ್ಟಿಗೆಯ ಕೆಳಗೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಮ್ಮ ಯುವಕರಿಗೆ ಬೀಸುವ ಕಲ್ಲು ಹಿಡಿವ ಗತಿ ನಮ್ಮ ಮಕ್ಕಳಿಗೆ ಸೌದೆ ಹೊತ್ತು ಮುಗ್ಗರಿಸುವ ಪರಿಸ್ಥಿತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯುವಕಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು, ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಮ್ಮ ಯುವಕರನ್ನು ಬೀಸುವ ಕಲ್ಲುಗಳಿಂದ ದವಸಧಾನ್ಯಗಳನ್ನು ಬೀಸುವವರನ್ನಾಗಿ ವೈರಿಗಳು ಮಾಡಿದರು. ನಮ್ಮ ಯುವಕರು ಶ್ರಮದ ಕೆಲಸದಿಂದ ಮುಗ್ಗರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:13
11 ತಿಳಿವುಗಳ ಹೋಲಿಕೆ  

ಆದರೆ ಫಿಲಿಷ್ಟಿಯರು ಅವನನ್ನು ಹಿಡಿದು, ಅವನ ಕಣ್ಣುಗಳನ್ನು ಕಿತ್ತು, ಅವನನ್ನು ಗಾಜಕ್ಕೆ ಒಯ್ದು ಎರಡು ಕಂಚಿನ ಸಂಕೋಲೆಗಳನ್ನು ಹಾಕಿದರು. ಸೆರೆಮನೆಯಲ್ಲಿ ಅವನನ್ನು ಬೀಸುವುದಕ್ಕೆ ಹಚ್ಚಿದರು.


ಹೊರುವುದಕ್ಕೆ ಭಾರವಾದ ಮತ್ತು ಹೊರಲಾಗದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಅವರು ಹೊರಿಸುತ್ತಾರೆ. ತಾವಾದರೋ ತಮ್ಮ ಬೆರಳಿನಿಂದಲೂ ಅವುಗಳನ್ನು ಮುಟ್ಟುವುದಿಲ್ಲ.


“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?


ಬೀಸುವ ಕಲ್ಲನ್ನು ಹಿಡಿದು, ಹಿಟ್ಟನ್ನು ಬೀಸು. ಮುಸುಕನ್ನು ತೆಗೆದುಹಾಕಿ, ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ, ನದಿಗಳನ್ನು ಹಾದುಹೋಗು.


ನನ್ನ ಹೆಂಡತಿ ಮತ್ತೊಬ್ಬನಿಗೋಸ್ಕರ ಧಾನ್ಯಬೀಸಲಿ, ಮತ್ತೊಬ್ಬರು ಅವಳ ಸಂಗಡ ಮಲಗಲಿ.


ನಿಮ್ಮನ್ನು ಹಗೆ ಮಾಡುವವನ ಕತ್ತೆಯು ತನ್ನ ಹೊರೆಯ ಕೆಳಗೆ ಬಿದ್ದಿರುವುದನ್ನು ನೀವು ಕಂಡಾಗ, ಅವನಿಗೆ ಸಹಾಯ ಮಾಡುವುದಕ್ಕೆ ಮನಸ್ಸಿಲ್ಲದಿದ್ದರೂ ನೀವು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.


ಆಗ ಈಜಿಪ್ಟ್ ದೇಶದ ಚೊಚ್ಚಲ ಮಕ್ಕಳು ಅಂದರೆ, ಸಿಂಹಾಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲನ್ನು ಹಿಡಿದಿರುವ ದಾಸಿಯ ಚೊಚ್ಚಲ ಮಗನವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವೂ ಸಾಯುವುವು.


ಹಲವು ವರ್ಷಗಳ ನಂತರ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡಿದಾಗ, ಒಬ್ಬ ಈಜಿಪ್ಟಿನವನು ತನ್ನ ಸಹೋದರರಲ್ಲಿ ಒಬ್ಬ ಹಿಬ್ರಿಯನನ್ನು ಹೊಡೆಯುವುದನ್ನು ನೋಡಿದನು.


ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


‘ಗಗನದ ಒಡತಿ,’ ಎಂದು ಇವರು ಕರೆಯುವ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯ ದೇವತೆಗಳಿಗೆ ಪಾನ ನೈವೇದ್ಯವನ್ನು ಅರ್ಪಿಸುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು