Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:10 - ಕನ್ನಡ ಸಮಕಾಲಿಕ ಅನುವಾದ

10 “ನೋಡು, ಇದು ಹೊಸದು,” ಎಂದು ಯಾವ ವಿಷಯವಾಗಿ ಹೇಳಬಹುದೋ? ಅದು ನಮಗಿಂತ ಮುಂಚೆ ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ? ನಮಗಿಂತ ಮೊದಲು ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಗೋ, ಹೊಸದು ಎನಿಸುಕೊಳ್ಳುವ ವಸ್ತು ಇದ್ದರೂ ಅದು ನಮಗಿಂತ ಮುಂಚೆಯೇ ಪುರಾತನ ಕಾಲದಲ್ಲೇ ಇದ್ದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಗೋ, ಹೊಸದು ಎನಿಸಿಕೊಳ್ಳುವ ವಸ್ತುವಿದ್ದರೂ ಅದು ಪೂರ್ವದಲ್ಲಿ ನಮಗಿಂತ ಮುಂಚಿನ ಯುಗಗಳಲ್ಲಿಯೂ ಇದ್ದದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಇಗೋ, ಇದು ಹೊಸದು!” ಎಂದು ಒಬ್ಬನು ಹೇಳಬಹುದು. ಆದರೆ ಅದು ಸಹ ಮೊದಲಿಂದ ಇಲ್ಲಿ ಇದ್ದದ್ದೇ. ನಮಗಿಂತ ಮೊದಲೇ ಅದು ಇಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:10
10 ತಿಳಿವುಗಳ ಹೋಲಿಕೆ  

“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.


ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.


ಇದ್ದದ್ದೇ ಇರುವುದು, ನಡೆದದ್ದೇ ನಡೆಯುವುದು. ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.


ಹಿಂದಿನ ಕಾಲದ ಜನರ ಜ್ಞಾಪಕವು ಈಗಿನವರಿಗಿಲ್ಲ. ಮುಂದಿನ ಕಾಲದಲ್ಲಿ ಬರುವವರ ಜ್ಞಾಪಕವು ಅವುಗಳ ಮುಂದಿನ ಕಾಲದ ಜನರಿಗೆ ಇರುವುದಿಲ್ಲ.


ಅನಂತರ ಜ್ಞಾನವನ್ನೂ ಮನಗುಂದುವಿಕೆಯನ್ನೂ ಮೂಡತೆಯನ್ನೂ ಮತ್ತೆ ಯೋಚಿಸುವುದಕ್ಕೆ ನಾನು ತಿರುಗಿಕೊಂಡೆನು. ಈಗಾಗಲೇ ಮಾಡಿದ್ದನ್ನು ಬಿಟ್ಟು, ಅರಸನ ತರುವಾಯ ಬರುವವನು ಹೊಸದಾಗಿ ಏನು ಮಾಡಬಲ್ಲನು?


ಜಗತ್ತಿನಲ್ಲಿ ಇರುವ ಎಲ್ಲದಕ್ಕೂ ಈಗಾಗಲೇ ಹೆಸರನ್ನು ಇಡಲಾಗಿದೆ. ಮನುಷ್ಯನು ಯಾರು ಎಂದೂ ಗೊತ್ತಾಗಿದೆ. ತನಗಿಂತ ಬಲಿಷ್ಟನೊಂದಿಗೆ ಯಾರೂ ಹೋರಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು