Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:13 - ಕನ್ನಡ ಸಮಕಾಲಿಕ ಅನುವಾದ

13 ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಕಾಶದ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸಲು ಮನಸ್ಸಿಟ್ಟೆನು; ನರಜನ್ಮದವರ ಕರ್ತವ್ಯವೆಂದು ದೇವರು ನೇವಿುಸಿರುವ ಆ ಕೆಲಸವೆಲ್ಲಾ ಬಹು ಪ್ರಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಜೀವಿತದ ಎಲ್ಲಾ ವಿಷಯಗಳನ್ನು ಜ್ಞಾನದಿಂದ ವಿಮರ್ಶಿಸಿ ಕಲಿತುಕೊಳ್ಳಲು ನಿರ್ಧರಿಸಿದೆನು. ದೇವರು ಮನುಷ್ಯರಿಗೆ ಕೊಟ್ಟಿರುವ ಕೆಲಸವೆಲ್ಲ ಬಹು ಪ್ರಯಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:13
22 ತಿಳಿವುಗಳ ಹೋಲಿಕೆ  

ದೇವರು ಮಾನವ ಜನಾಂಗದ ಮೇಲೆ ಹೊರಿಸಿರುವ ಭಾರವನ್ನು ನಾನು ನೋಡಿದ್ದೇನೆ.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಆಗ ಜ್ಞಾನವನ್ನೂ ಮನಗುಂದುವಿಕೆಯನ್ನೂ ಬುದ್ಧಿಹೀನತೆಯನ್ನೂ ತಿಳಿದುಕೊಳ್ಳುವಂತೆ ನಾನು ಮನಸ್ಸಿಟ್ಟೆನು, ಅದರ ಜೊತೆಗೆ ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ, ಎಂದು ನಾನು ಅರಿತುಕೊಂಡೆನು.


ಈ ವಿಷಯಗಳನ್ನು ಧ್ಯಾನಿಸುವವನಾಗಿರು. ಇವುಗಳಲ್ಲಿಯೇ ನೆಲೆಗೊಂಡಿರು. ಹೀಗೆ ನಿನ್ನ ಪ್ರಗತಿಯು ಎಲ್ಲರಿಗೂ ಪ್ರಕಟವಾಗುವುದು.


ನನ್ನ ಮಗುವೇ, ಇವುಗಳನ್ನಲ್ಲದೇ, ನೀನು ಎಚ್ಚರಿಕೆಯಿಂದ ಇರಬೇಕಾದ ವಿಷಯಗಳು ಇನ್ನೂ ಇವೆ. ಬಹಳ ಪುಸ್ತಕಗಳ ರಚನೆಗೆ ಅಂತ್ಯವಿಲ್ಲ. ಅತಿಯಾದ ಅಭ್ಯಾಸವು ದೇಹಕ್ಕೆ ಆಯಾಸ.


ಜ್ಞಾನದ ಮೂಲ ತತ್ವವನ್ನೂ, ದುಷ್ಟತನದ ಮೂಢತನವನ್ನೂ, ಮೂಢತ್ವದ ಹುಚ್ಚುತನವನ್ನೂ ಪರೀಕ್ಷಿಸಿ ತಿಳಿದುಕೊಳ್ಳುವಂತೆ ಮನಸ್ಸುಮಾಡಿದೆನು.


ನಾನು ಇದನ್ನೆಲ್ಲಾ ನೋಡಿ, ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡೆಸುವ ಕಾಲವೂ ಇದೆ.


ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.


ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಅವನ ದಿನಗಳೆಲ್ಲಾ ವ್ಯಸನವೇ. ಅವನ ಪ್ರಯಾಸವು ದುಃಖವೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಕೂಡ ವ್ಯರ್ಥವೇ.


ಮಗನೇ, ನಿನ್ನ ಮನಸ್ಸನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ಅನುಸರಿಸುವಲ್ಲಿ ನಿಮ್ಮ ಕಣ್ಣುಗಳು ಆನಂದಿಸಲಿ.


ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.


ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.


ಜ್ಞಾನವೇ ಮುಖ್ಯವಾದದ್ದು, ಆದ್ದರಿಂದ ಜ್ಞಾನವನ್ನು ಸಂಪಾದಿಸು; ನಿನ್ನಲ್ಲಿರುವ ಎಲ್ಲಾ ಸಂಪತ್ತನ್ನು ವ್ಯಯಮಾಡಿದರೂ ತಿಳುವಳಿಕೆಯನ್ನು ಪಡೆದುಕೋ.


ಯೆಹೋವ ದೇವರ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷ ಪಡುವವರೆಲ್ಲರು ಅವುಗಳನ್ನೇ ಧ್ಯಾನಿಸುತ್ತಾರೆ.


ಮನುಷ್ಯರು ಕತ್ತಲನ್ನು ಹೋಗಲಾಡಿಸುತ್ತಾರೆ; ಕಾರ್ಗತ್ತಲಲ್ಲಿಯೂ ಮರೆಯಾಗಿರುವ ಲೋಹಗಳಿಗಾಗಿ ಭೂಮಿಯ ಆಳ ಪ್ರದೇಶದೊಳಗೆ ಅವರು ಶೋಧಿಸುತ್ತಾರೆ.


ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ.


ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. ಅವನು, “ನಾನು ಸುಖಸಂತೋಷವನ್ನು ತೊರೆದು, ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. ಇದು ಕೂಡ ವ್ಯರ್ಥವೇ, ಪ್ರಯಾಸದ ಕೆಲಸವೇ ಸರಿ.


ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನೀನು ಹೇಗೆ ಗ್ರಹಿಸಲಾರೆಯೋ, ಹಾಗೆಯೇ, ಸರ್ವ ಸೃಷ್ಟಿಕರ್ತ ಆಗಿರುವ ದೇವರ ಕೆಲಸವನ್ನು ನೀನು ಗ್ರಹಿಸಲಾರೆ.


ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು