Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:6 - ಕನ್ನಡ ಸಮಕಾಲಿಕ ಅನುವಾದ

6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುತ್ತದೆ. ಸುತ್ತುತ್ತಾ, ಸುತ್ತುತ್ತಾ ಹೋಗುತ್ತದೆ. ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರುಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗಾಳಿ ದಕ್ಷಿಣಕ್ಕೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ, ಸುತ್ತುತ್ತಾ ಸುತ್ತುತ್ತಾ ಹೋಗಿ ಹಿಂತಿರುಗಿ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಗಾಳಿಯು ತೆಂಕಣಕ್ಕೆ ಬೀಸಿ ಬಡಗಣಕ್ಕೆ ತಿರುಗುವದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಗಾಳಿಯು ದಕ್ಷಿಣಕ್ಕೆ ಬೀಸುವುದು; ನಂತರ ಉತ್ತರಕ್ಕೆ ತಿರುಗಿಕೊಳ್ಳುವುದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:6
11 ತಿಳಿವುಗಳ ಹೋಲಿಕೆ  

ಗಾಳಿಯು ಅದರ ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಅದರಂತೆಯೇ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬರೂ ಹೀಗೇ ಇದ್ದಾರೆ,” ಎಂದು ಉತ್ತರಕೊಟ್ಟರು.


ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನೀನು ಹೇಗೆ ಗ್ರಹಿಸಲಾರೆಯೋ, ಹಾಗೆಯೇ, ಸರ್ವ ಸೃಷ್ಟಿಕರ್ತ ಆಗಿರುವ ದೇವರ ಕೆಲಸವನ್ನು ನೀನು ಗ್ರಹಿಸಲಾರೆ.


ದೇವರು ಬಿರುಗಾಳಿಯನ್ನು ಶಾಂತ ಮಾಡಿದರು. ಅದರ ತೆರೆಗಳು ನಿಂತುಹೋದವು.


ದೇವರು ಆಜ್ಞಾಪಿಸಿ ಬಿರುಗಾಳಿಯನ್ನು ಎಬ್ಬಿಸಿದರು; ಅದು ಅದರ ತೆರೆಗಳನ್ನು ಎಬ್ಬಿಸಿತು.


ಭೂಮಿಯು ದಕ್ಷಿಣ ಗಾಳಿಯಿಂದ ಸ್ತಬ್ಧವಾಗಿರುವಾಗ, ನಿನ್ನ ವಸ್ತ್ರ ಹೇಗೆ ಬಿಸಿಯಾಗಿರುತ್ತವೆ?


ದಕ್ಷಿಣದಿಕ್ಕಿನಿಂದ ಬಿರುಗಾಳಿಯು ಬೀಸುತ್ತದೆ. ಉತ್ತರದಿಂದ ಚಳಿಯೂ ಬರುತ್ತದೆ.


ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು,” ಎಂದರು.


“ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.


ಆದರೆ ಯೆಹೋವ ದೇವರು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದರು. ಸಮುದ್ರದಲ್ಲಿ ಮಹಾ ಬಿರುಗಾಳಿ ಉಂಟಾಗಿ, ಹಡಗು ಒಡೆಯುವುದರಲ್ಲಿತ್ತು.


ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ, ಆ ಸ್ಥಳಕ್ಕೆ ಅವು ಹಿಂದಿರುಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು