Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:1 - ಕನ್ನಡ ಸಮಕಾಲಿಕ ಅನುವಾದ

1 ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸತ್ತ ನೊಣಗಳಿಂದ ಗಂದಿಗನ ತೈಲ ಕೂಡ ನಾರುತ್ತದೆ. ಅಂತೆಯೇ ಹುಚ್ಚುತನ ಕೊಂಚವಾದರೂ ಜ್ಞಾನಮಾನಗಳನ್ನು ಕೆಡಿಸಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸತ್ತ ನೊಣಗಳಿಂದ ಗಂದಿಗನ ತೈಲವು ಕೊಳೆತು ನಾರುವದು; ಹಾಗೆಯೇ ಹುಚ್ಚುತನ ಸ್ವಲ್ಪವಾದರೂ ಜ್ಞಾನಮಾನಗಳನ್ನು ಮುಚ್ಚಿ ಮೀರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸತ್ತ ನೊಣಗಳಿಂದ ಉತ್ತಮವಾದ ಪರಿಮಳತೈಲವು ದುರ್ವಾಸನೆ ಬೀರುವುದು. ಅದೇರೀತಿಯಲ್ಲಿ ಚಿಕ್ಕ ಮೂಢತನವು ಬಹುಜ್ಞಾನವನ್ನೂ ಸನ್ಮಾನವನ್ನೂ ಹಾಳುಮಾಡಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:1
11 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಅರಸನಾದ ಸೊಲೊಮೋನನು ಇಂತಹ ಮದುವೆಗಳಿಂದ ಪಾಪ ಮಾಡಿದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ, ಅವನು ತನ್ನ ದೇವರಿಗೆ ವಿಶೇಷಪ್ರಿಯನಾಗಿದ್ದನು, ಆದ್ದರಿಂದಲೇ ದೇವರು ಅವನನ್ನು ಎಲ್ಲ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ವಿದೇಶಿ ಸ್ತ್ರೀಯರು ಅವನನ್ನು ಕೂಡ ಪಾಪಮಾಡುವ ಹಾಗೆ ಮಾಡಿದರು.


ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.


ಅದರಿಂದ ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು. ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿರುವುದು.


ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವಂತೆಯೂ ಅವರು ನನ್ನನ್ನು ನಿಂದಿಸುವುದಕ್ಕೆ ಅಪಕೀರ್ತಿಯ ಕಾರಣವು ಅವರಿಗೆ ಸಿಕ್ಕುವಂತೆಯೂ ಶೆಮಾಯನಿಗೆ ಲಂಚಕೊಟ್ಟಿದ್ದರು.


ಏಕೆಂದರೆ ನನ್ನ ಕಷ್ಟ ಈಗಲೇ ಸಮುದ್ರದ ಮರಳಿಗಿಂತ ಭಾರವಾಗಿದೆ; ನನ್ನ ಮಾತುಗಳು ದುಡುಕಿದ್ದರಲ್ಲಿ ಆಶ್ಚರ್ಯವಿಲ್ಲ.


ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.


ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪ್ರತಿಷ್ಠಿಸಿದ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾದರೂ ಎಣ್ಣೆಯನ್ನಾದರೂ ಯಾವ ವಿಧವಾದ ಆಹಾರವನ್ನಾದರೂ ಮುಟ್ಟಿದರೆ, ಅದು ಪರಿಶುದ್ಧವಾಗುವುದೋ? ಕೇಳು,’ ” ಎಂದನು. ಹಗ್ಗಾಯನು ಹಾಗೆ ವಿಚಾರಿಸಲು, ಯಾಜಕರು, “ಇಲ್ಲ,” ಎಂದು ಉತ್ತರಕೊಟ್ಟರು.


ಆಗ ಹಗ್ಗಾಯನು, “ಹೆಣದಿಂದ ಅಶುದ್ಧವಾದವನು, ಇವುಗಳಲ್ಲಿ ಯಾವುದನ್ನಾದರೂ ಮುಟ್ಟಿದರೆ, ಅಶುದ್ಧವಾಗುವುದೋ?” ಎಂದನು. ಯಾಜಕರು ಉತ್ತರವಾಗಿ, “ಹೌದು, ಅಶುದ್ಧವಾಗುವುದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು