Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:13 - ಕನ್ನಡ ಸಮಕಾಲಿಕ ಅನುವಾದ

13 ಅವನ ಮಾತುಗಳು ಆರಂಭದಲ್ಲಿ ಮೂಢತನವಾಗಿರುವುದು. ಅವನ ಮಾತಿನ ಅಂತ್ಯವು ಹುಚ್ಚುತನವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಜ್ಞಾನಿಯ ಮಾತುಗಳ ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರುಳುತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮೂಢನ ಮಾತು ಮೂರ್ಖತನದೊಡನೆ ಆರಂಭಗೊಂಡು ದುಷ್ಟಕರವಾದ ಹುಚ್ಚುತನದೊಡನೆ ಕೊನೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:13
25 ತಿಳಿವುಗಳ ಹೋಲಿಕೆ  

ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯಮಾಡುವಾಗ, ಮೂರ್ಖನು ರೇಗಿದರೂ ಅಪಹಾಸ್ಯಮಾಡಿದರೂ ಸಮಾಧಾನವೇ ಇರುವುದಿಲ್ಲ.


ಮುಖ್ಯಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚಿಸಿದರು.


ಆದರೆ ಊಟಕ್ಕೆ ಮೊದಲು ಯೇಸು ಕೈತೊಳೆಯದೆ ಇರುವುದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.


ಆದರೆ ಫರಿಸಾಯರೂ ನಿಯಮ ಬೋಧಕರೂ ತುಂಬಾ ಕೋಪಗೊಂಡು ಯೇಸುವಿಗೆ ಏನಾದರೂ ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಫರಿಸಾಯರಲ್ಲಿ ಕೆಲವರು ಅವರಿಗೆ, “ಸಬ್ಬತ್ ದಿನದಲ್ಲಿ ಮೋಶೆಯ ನಿಯಮಕ್ಕೆ ವಿರುದ್ಧವಾಗಿರುವದನ್ನು ನೀವು ಏಕೆ ಮಾಡುತ್ತೀರಿ?” ಎಂದರು.


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಆಗ ಅವನು, “ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ, ದೇವರು ನನಗೆ ಇದರಂತೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ,” ಎಂದನು.


ಅದಕ್ಕವನು, “ಯೆಹೋವ ದೇವರು ನಿನಗೆ ಸಹಾಯ ಮಾಡದೆ ಹೋದರೆ, ನಾನು ಎಲ್ಲಿಂದ ನಿನಗೆ ಸಹಾಯ ಮಾಡಲಿ? ಕಣದಿಂದಲೋ, ದ್ರಾಕ್ಷಿ ಆಲೆಯಿಂದಲೋ?” ಎಂದನು.


ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು.


ನಾಲ್ಕನೆಯ ದಿವಸದಲ್ಲಿ ಅವರು ಸಂಸೋನನ ಹೆಂಡತಿಗೆ, “ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡದ ಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರಳುಗೊಳಿಸು. ನೀನು ನಮಗಿರುವುದೆಲ್ಲವನ್ನು ಕಸಿದುಕೊಳ್ಳುವುದಕ್ಕೆ ಅಲ್ಲವೇ ನಮ್ಮನ್ನು ಇಲ್ಲಿಗೆ ಕರೆಸಿದೆ?” ಎಂದರು.


ಜ್ಞಾನದ ಮೂಲ ತತ್ವವನ್ನೂ, ದುಷ್ಟತನದ ಮೂಢತನವನ್ನೂ, ಮೂಢತ್ವದ ಹುಚ್ಚುತನವನ್ನೂ ಪರೀಕ್ಷಿಸಿ ತಿಳಿದುಕೊಳ್ಳುವಂತೆ ಮನಸ್ಸುಮಾಡಿದೆನು.


ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. ಆದರೂ ಅವನು ಭವಿಷ್ಯ ಏನೆಂದು ತಿಳಿಯನು. ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ.


ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.


ನೀನು ದುಡುಕಿ ಮಾತನಾಡಬೇಡ, ದೇವರ ಮುಂದೆ ಮಾತನಾಡಲು ನಿನ್ನ ಹೃದಯವು ಆತುರಪಡದೇ ಇರಲಿ. ದೇವರು ಪರಲೋಕದಲ್ಲಿದ್ದಾರೆ. ನೀನಾದರೋ ಭೂಮಿಯ ಮೇಲೆ ಇರುವೆ, ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು