Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:19 - ಕನ್ನಡ ಸಮಕಾಲಿಕ ಅನುವಾದ

19 ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ವಿನೋದಕ್ಕಾಗಿ ಔತಣ, ಆನಂದಕ್ಕಾಗಿ ಮದ್ಯಪಾನ; ಎಲ್ಲವನ್ನು ಒದಗಿಸಿಕೊಡುವುದಕ್ಕಾಗಿ ಹಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು; ಧನವು ಎಲ್ಲವನ್ನೂ ಒದಗಿಸಿಕೊಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಊಟವು ಸಂತೋಷಗೊಳಿಸುವುದು; ದ್ರಾಕ್ಷಾರಸವು ಉಲ್ಲಾಸಗೊಳಿಸುವುದು; ಹಣವು ಅನೇಕ ಸಮಸ್ಯೆಗಳನ್ನು ಬಗೆಹರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:19
33 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.


ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.


ಅಲ್ಲದೆ, ನಾನು ನನ್ನ ಪ್ರಾಣಕ್ಕೆ, “ಪ್ರಾಣವೇ ಅನೇಕ ವರ್ಷಗಳಿಗಾಗಿ ನಿನಗೆ ಬಹಳ ಸರಕು ಇಡಲಾಗಿದೆ. ವಿಶ್ರಮಿಸಿಕೋ; ತಿನ್ನು, ಕುಡಿ ಮತ್ತು ಆನಂದವಾಗಿರು ಎಂದು ಹೇಳಿಕೊಳ್ಳುತ್ತೇನೆ,” ’ ಎಂದುಕೊಂಡನು.


ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ. ಉಲ್ಲಾಸವೆಲ್ಲ ಅಸ್ತಮಿಸಿದೆ. ಭೂಮಿಯ ಮೇಲಿನ ಸಂತೋಷವು ತೊಲಗಿಹೋಗಿದೆ.


ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


ಯೂದಾಯದಲ್ಲಿ ವಾಸಿಸುತ್ತಿದ್ದ ಸಹೋದರರಿಗೆ ಸಹಾಯ ಒದಗಿಸಲು ಅನುಕೂಲಸ್ಥರಾದ ಶಿಷ್ಯರು ತಮ್ಮ ಶಕ್ತ್ಯಾನುಸಾರ ಕೊಡಲು ನಿರ್ಧರಿಸಿದರು.


ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು.


ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು.


ಹೆರೋದನ ಅರಮನೆಯ ಗೃಹ ನಿರ್ವಾಹಕನಾದ ಕೂಜನ ಪತ್ನಿ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕರು ತಮ್ಮ ಆಸ್ತಿಯಿಂದ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರಮಾಡುತ್ತಿದ್ದರು.


ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು.


ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.


ಆದರೆ ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಯೆಹೋವ ದೇವರಿಗೆ ಪರಿಶುದ್ಧವಾಗುವುದು. ಅವಳ ಆದಾಯವು ಯೆಹೋವ ದೇವರ ಸನ್ನಿಧಾನದಲ್ಲಿ ವಾಸಿಸುವವರೆಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.


“ಇತರ ಜನರಿಗೆ ಗುಲಾಮರಾಗಿ ಮಾರಟವಾಗಿರುವ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿಯಿದ್ದಷ್ಟು ಬಿಡಿಸುತ್ತಿದ್ದೆವು. ಆದರೆ ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ. ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎಂದೆನು. ಆಗ ಅವರು ಹೇಳಲು ಏನೂ ಸಿಗದ ಕಾರಣ ಅವರು ಮೌನವಾಗಿದ್ದರು.


ಅವರ ನೆರೆಯವರೆಲ್ಲರು ಎಲ್ಲಾ ಕಾಣಿಕೆಗಳಲ್ಲದೇ, ಬೆಳ್ಳಿ ಹಾಗೂ ಬಂಗಾರದಿಂದ ಮಾಡಿದ ವಸ್ತುಗಳಿಂದಲೂ, ಪಶುಗಳಿಂದಲೂ, ಬೆಲೆಯುಳ್ಳವುಗಳಿಂದಲೂ ಅವರಿಗೆ ಧಾರಾಳವಾಗಿ ಸಹಾಯ ಮಾಡಿದರು.


ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು, ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.


ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.


ಅಬೀಗೈಲಳು ನಾಬಾಲನ ಬಳಿಗೆ ಬಂದಾಗ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸಗೊಂಡಿತ್ತು. ಆದಕಾರಣ ಅವಳು ಉದಯವಾಗುವವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ, ಹೆಚ್ಚಾದದ್ದನ್ನಾಗಲಿ ತಿಳಿಸಲಿಲ್ಲ.


“ಆದರೆ ದ್ರಾಕ್ಷಿ ಗಿಡವು ಅವುಗಳಿಗೆ, ‘ದೇವರನ್ನೂ, ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.


ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು ಮತ್ತು ಅವರು ಅವನ ಸಂಗಡ ಕುಡಿದು ಸಂತೋಷದಿಂದಿದ್ದರು.


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಆಕಾಶದ ಕೆಳಗೆ ಮನುಷ್ಯರು ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಹಿತ ಎಂದು ನಾನು ತಿಳಿದುಕೊಳ್ಳಲು ಬಯಸಿದೆ. ನನ್ನ ಮನಸ್ಸು ಇನ್ನೂ ಜ್ಞಾನದಿಂದಿರುವಾಗಲೇ ದ್ರಾಕ್ಷಾರಸದಿಂದ ಸಂತೋಷ ಪಡೋಣ, ಮೂರ್ಖತನವನ್ನು ಅಪ್ಪಿಕೊಳ್ಳೋಣ ಎಂದುಕೊಂಡೆ.


ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ, ಸಂಸೋನನು ಪ್ರಾಯಸ್ಥರು ಮಾಡುವ ಪದ್ಧತಿಯ ಪ್ರಕಾರ ಅಲ್ಲಿ ಔತಣ ಮಾಡಿಸಿದನು.


ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು