ಪ್ರಸಂಗಿ 10:20 - ಕನ್ನಡ ಸಮಕಾಲಿಕ ಅನುವಾದ20 ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅರಸನನ್ನು ಮನಸ್ಸಿನಲ್ಲಿಯೂ ನಿಂದಿಸಬೇಡ; ಧನಿಕನನ್ನು ಮಲಗುವ ಕೋಣೆಯಲ್ಲೂ ದೂಷಿಸಬೇಡ; ಆಕಾಶದ ಹಕ್ಕಿ ಆ ಸುದ್ದಿಯನ್ನು ಮುಟ್ಟಿಸೀತು; ಹಾರುವ ಪಕ್ಷಿ ಆ ಸಮಾಚಾರವನ್ನು ತಿಳಿಸೀತು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮನಸ್ಸಿನಲ್ಲಿಯೂ ರಾಜನನ್ನು ದೂಷಿಸದಿರು, ಮಲಗುವ ಮನೆಯಲ್ಲಿಯೂ ಧನಿಕನನ್ನು ಬಯ್ಯದಿರು; ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸೀತು; ಪಕ್ಷಿಯು ಆ ವಿಷಯವನ್ನು ತಿಳಿಸೀತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ರಾಜನನ್ನು ಮನಸ್ಸಿನಲ್ಲಿಯೂ ದೂಷಿಸಬೇಡ; ನಿನ್ನ ಮನೆಯಲ್ಲಿ ಒಬ್ಬಂಟಿಗನಾಗಿರುವಾಗಲೂ ಐಶ್ವರ್ಯವಂತರನ್ನು ದೂಷಿಸಬೇಡ. ಯಾಕೆಂದರೆ ಚಿಕ್ಕ ಪಕ್ಷಿಯೊಂದು ಹಾರಿಹೋಗಿ, ನೀನು ಹೇಳಿದ ಪ್ರತಿಯೊಂದನ್ನು ಅವರಿಗೆ ಹೇಳಬಹುದು. ಅಧ್ಯಾಯವನ್ನು ನೋಡಿ |