Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:5 - ಕನ್ನಡ ಸಮಕಾಲಿಕ ಅನುವಾದ

5 ಮತ್ತೊಂದು ವ್ಯಸನವನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. ಅದು ಆಳುವವರಿಂದ ಬರುವ ತಪ್ಪಿನಿಂದಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ಕಂಡೆ. ಅದು ಅಧಿಪತಿಗಳ ತಪ್ಪಿನಿಂದಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ದೊರೆಯ ಪ್ರಮಾದದಿಂದಾದದ್ದೆಂದು ತೋರುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ನೋಡಿದ್ದೇನೆ. ಅದು ಅಧಿಪತಿಗಳು ಮಾಡುವ ತಪ್ಪಿನಂತೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:5
10 ತಿಳಿವುಗಳ ಹೋಲಿಕೆ  

ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ: ಸಂಗ್ರಹಿಸಿದ ಆಸ್ತಿ ಯಜಮಾನನಿಗೆ ಹಾನಿ.


ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ವ್ಯಸನವು. ಎಲ್ಲರಿಗೂ ಒಂದೇ ಗತಿ ಇದೆ. ಹೌದು, ಮನುಷ್ಯರ ಹೃದಯದಲ್ಲಿ ಕೆಟ್ಟತನ ತುಂಬಿವೆ. ಅವರು ಬದುಕಿರುವ ತನಕ ಅವರ ಹೃದಯಗಳಲ್ಲಿ ಹುಚ್ಚುತನವಿದೆ. ಅನಂತರ ಅವರು ಸಾಯುತ್ತಾರೆ.


ಸೂರ್ಯನ ಕೆಳಗೆ ಇರುವ ಇನ್ನೊಂದು ಕೇಡನ್ನು ಕಂಡೆನು, ಅದು ಮನುಷ್ಯರ ಮೇಲೆ ಬಹು ಭಾರವಾಗಿದೆ.


ಆಗ ಮತ್ತೆ ನಾನು ಸೂರ್ಯನ ಕೆಳಗೆ ವ್ಯರ್ಥವಾದದ್ಡನ್ನು ಕಂಡೆನು:


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಇದಕ್ಕಿಂತಲೂ ಬೇರೆಯಾದದ್ದನ್ನು ಸೂರ್ಯನ ಕೆಳಗೆ ನೋಡಿದೆನು: ನ್ಯಾಯತೀರ್ಪಿನ ಸ್ಥಳದಲ್ಲಿ ದುಷ್ಕೃತ್ಯ ಇತ್ತು. ನೀತಿಯ ಸ್ಥಾನದಲ್ಲಿಯೂ ದುಷ್ಟತ್ವ ಇತ್ತು.


ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ.


ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ.


ಅದು ಯಾವುದೆಂದರೆ, ಮೂರ್ಖರನ್ನು ಉನ್ನತ ಪದವಿಗೆ ನೇಮಿಸುವುದು. ಘನವಂತರನ್ನು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವಂತೆ ಮಾಡುವುದು.


ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು