ಪ್ರಸಂಗಿ 10:6 - ಕನ್ನಡ ಸಮಕಾಲಿಕ ಅನುವಾದ6 ಅದು ಯಾವುದೆಂದರೆ, ಮೂರ್ಖರನ್ನು ಉನ್ನತ ಪದವಿಗೆ ನೇಮಿಸುವುದು. ಘನವಂತರನ್ನು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವಂತೆ ಮಾಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮೂಢರಿಗೆ ಮಹಾ ಪದವಿ ದೊರೆಯುವುದು. ಘನವಂತರೂ ಹೀನಸ್ಥಿತಿಯಲ್ಲಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದು ಯಾವುದೆಂದರೆ, ಮೂಢರನ್ನು ಮಹಾಪದವಿಗೆ ಏರಿಸುತ್ತಾರೆ; ಘನವಂತರನ್ನು ಹೀನಸ್ಥಿತಿಯಲ್ಲಿ ಇರಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮೂಢರಿಗೆ ಮಹಾಪದವಿ ದೊರೆತಿರುವದು, ಘನವಂತರು ಹೀನ ಸ್ಥಿತಿಯಲ್ಲಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಘನವಂತರಿಗೆ ಹೀನವಾದ ಸ್ಥಾನ ದೊರೆಯುವುದು; ಮೂಢರಿಗೆ ಮುಖ್ಯವಾದ ಪದವಿಗಳು ದೊರೆಯುವವು. ಅಧ್ಯಾಯವನ್ನು ನೋಡಿ |