ಪ್ರಸಂಗಿ 11:5 - ಕನ್ನಡ ಸಮಕಾಲಿಕ ಅನುವಾದ5 ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನೀನು ಹೇಗೆ ಗ್ರಹಿಸಲಾರೆಯೋ, ಹಾಗೆಯೇ, ಸರ್ವ ಸೃಷ್ಟಿಕರ್ತ ಆಗಿರುವ ದೇವರ ಕೆಲಸವನ್ನು ನೀನು ಗ್ರಹಿಸಲಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನಿನ್ನಿಂದ ತಿಳಿಯಲಾಗದು. ಅಂತೆಯೇ ಸರ್ವೇಶ್ವರನಾದ ದೇವರ ಕಾರ್ಯವನ್ನು ನಿನ್ನಿಂದ ಗ್ರಹಿಸಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಗಾಳಿಯ ಗತಿಯನ್ನೂ ಗರ್ಭಿಣಿಯ ಗರ್ಭದೊಳಗೆ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿಯುವದಿಲ್ಲವೋ ಹಾಗೆ ಸರ್ವಕರ್ತನಾದ ದೇವರ ಕಾರ್ಯವನ್ನು ಅರಿಯೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಗಾಳಿಯ ಬೀಸುವಿಕೆಯನ್ನೂ ತನ್ನ ತಾಯಿಯ ಗರ್ಭದಲ್ಲಿ ಮಗುವಿನ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿದಿಲ್ಲವೋ ಅದೇರೀತಿಯಲ್ಲಿ ಸೃಷ್ಟಿಕರ್ತನ ಕಾರ್ಯಗಳನ್ನು ನೀನು ಅರಿತುಕೊಳ್ಳಲಾರೆ. ಅಧ್ಯಾಯವನ್ನು ನೋಡಿ |