Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:13 - ಕನ್ನಡ ಸಮಕಾಲಿಕ ಅನುವಾದ

13 ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ವಿಷಯವು ತೀರಿತು; ಎಲ್ಲವೂ ಕೇಳಿ ಮುಗಿಯಿತು; ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು; ಮನುಷ್ಯರೆಲ್ಲರ [ಕರ್ತವ್ಯವು] ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:13
27 ತಿಳಿವುಗಳ ಹೋಲಿಕೆ  

ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ.


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ನೀವೂ, ನಿಮ್ಮ ಮಕ್ಕಳೂ, ನಿಮ್ಮ ಮೊಮ್ಮಕ್ಕಳೂ ತಮ್ಮ ಜೀವನದ ದಿವಸಗಳಲ್ಲೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಕೈಗೊಳ್ಳುವ ಹಾಗೆಯೂ, ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಾನು ನಿಮಗೆ ಕೊಡುವ ದೇವರ ಎಲ್ಲಾ ತೀರ್ಪುಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಬೇಕು.


ಯೆಹೋವ ದೇವರ ಭಯವು ಜ್ಞಾನದ ಮೂಲವು; ಅವರ ಸೂತ್ರಗಳನ್ನು ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು; ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ.


ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ. ಅವರ ಮೊರೆಯನ್ನು ಕೇಳಿ, ಅವರನ್ನು ರಕ್ಷಿಸುತ್ತಾರೆ.


ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ, ಬಹುಕಾಲ ಬದುಕಿದರೂ ದೇವರಿಗೆ ಹೆದರಿ ದೈವಭಕ್ತಿಯುಳ್ಳವರಿಗೆ ಒಳ್ಳೆಯದಾಗುವುದೆಂದು ನಾನು ಬಲ್ಲೆನು.


ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.


ಯೆಹೋವ ದೇವರ ಭಯವು ಜೀವದಾಯಕವು; ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ.


ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.


ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.


ಬಹು ಕನಸುಗಳೂ ಬಹು ಮಾತುಗಳೂ ವ್ಯರ್ಥವಾದವುಗಳು. ಆದ್ದರಿಂದ ನೀನು ದೇವರಿಗೆ ಭಯಪಡು.


ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಸ್ವರವು: “ದೇವರ ಎಲ್ಲಾ ದಾಸರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಸ್ತುತಿಸಿರಿ!” ಎಂದು ಹೇಳಿತು.


ಎಲ್ಲರನ್ನು ಸನ್ಮಾನಿಸಿರಿ, ವಿಶ್ವಾಸಿಗಳ ಸಹೋದರತ್ವವನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ, ಅರಸನನ್ನು ಸನ್ಮಾನಿಸಿರಿ.


ಪಾಪಿಗಳನ್ನು ನೋಡಿ ನಿನ್ನ ಹೃದಯವು ಅಸೂಯೆಪಡದಿರಲಿ; ಆದರೆ ಯೆಹೋವ ದೇವರ ಭಯದಲ್ಲಿರಲು ಯಾವಾಗಲೂ ಆಸಕ್ತನಾಗಿರು.


ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು.


ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ಎಲ್ಲಾ ದಿವಸಗಳಲ್ಲಿ ಅವನಿಗೆ ಯಾವುದು ಒಳ್ಳೆಯದೆಂದು ಯಾರಿಗೆ ಗೊತ್ತು? ಅವನು ಹೊರಟುಹೋದ ಮೇಲೆ ಸೂರ್ಯನ ಕೆಳಗೆ ಏನಾಗುತ್ತದೆಂದು ಅವನಿಗೆ ಯಾರು ಹೇಳಬಲ್ಲರು?


ಆಕಾಶದ ಕೆಳಗೆ ಮನುಷ್ಯರು ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಹಿತ ಎಂದು ನಾನು ತಿಳಿದುಕೊಳ್ಳಲು ಬಯಸಿದೆ. ನನ್ನ ಮನಸ್ಸು ಇನ್ನೂ ಜ್ಞಾನದಿಂದಿರುವಾಗಲೇ ದ್ರಾಕ್ಷಾರಸದಿಂದ ಸಂತೋಷ ಪಡೋಣ, ಮೂರ್ಖತನವನ್ನು ಅಪ್ಪಿಕೊಳ್ಳೋಣ ಎಂದುಕೊಂಡೆ.


ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.


ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.


ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.


ಅರಸನ ಆಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸುವುದಿಲ್ಲ, ಜ್ಞಾನಿಯ ಹೃದಯವು ಸರಿಯಾದ ಕಾಲ ಕ್ರಮವನ್ನು ತಿಳಿದುಕೊಳ್ಳುತ್ತದೆ.


ನೀವು ಹೋರೇಬಿನಲ್ಲಿ ಯೆಹೋವ ದೇವರ ಮುಂದೆ ನಿಂತ ದಿವಸದಂದು ದೇವರು ನನಗೆ, “ಜನರನ್ನು ನನಗಾಗಿ ಕೂಡಿಸು, ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದನ್ನು ಕಲಿತು, ತಮ್ಮ ಮಕ್ಕಳಿಗೂ ಬೋಧಿಸುವಂತೆ ನಾನು ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡುವೆನು,” ಎಂದರು.


ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು.


ನಿನ್ನ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಅನುಸರಿಸಿ ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ನಿಯಮದಲ್ಲಿ ಬರೆದಿರುವ ಅವರ ಆಜ್ಞಾನಿಯಮಗಳಿಗೂ, ವಿಧಿನಿರ್ಣಯಗಳಿಗೂ ವಿಧೇಯನಾಗಿರು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ, ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿಯೂ ಯಶಸ್ವಿಯಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು