ಪ್ರಸಂಗಿ 12:5 - ಕನ್ನಡ ಸಮಕಾಲಿಕ ಅನುವಾದ5 ಎತ್ತರವನ್ನು ಕಂಡು ಹೆದರಿಕೆಯಾಗುವುದು. ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. ಬಾದಾಮಿಯ ಮರದಂತೆ ಹೂವು ಬಿಡುವುದು. ಮಿಡತೆಯು ಸಹ ಭಾರಾವಾಗಿರುವುದು. ಆಸೆ ಕುಂದಿಹೋಗುವುದು. ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ಆ ದಿನಗಳಲ್ಲಿ ದಿನ್ನೆ ಕಂಡರೆ ಭಯ, ದಾರಿಯಲ್ಲಿ ಅಪಾಯ; ಬಾದಾವಿುಯ ಮರವು ಹೂಬಿಡುವದು; ವಿುಡತೆಯು ಕೂಡ ಭಾರವಾಗುವದು; ಆಶೆಯು ಕುಂದುವದು, ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವದಕ್ಕಿದ್ದಾನಲ್ಲಾ; ಗೋಳಾಟದವರು ಬೀದಿಯಲ್ಲಿ ತಿರುಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸ ಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು. ಅಧ್ಯಾಯವನ್ನು ನೋಡಿ |