Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:9 - ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಉಪದೇಶಕನು ಜ್ಞಾನಿಯಾಗಿದ್ದ; ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದ. ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ, ಕ್ರಮಪಡಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮತ್ತು ಪ್ರಸಂಗಿಯು ಜ್ಞಾನಿಯಾಗಿದ್ದದ್ದಲ್ಲದೆ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ ಪರೀಕ್ಷಿಸಿ ಕ್ರಮಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪ್ರಸಂಗಿಯು ತುಂಬ ಜ್ಞಾನಿಯಾಗಿದ್ದನು. ಪ್ರಸಂಗಿಯು ಅನೇಕ ಜ್ಞಾನೋಪದೇಶಗಳನ್ನು ತುಂಬ ಎಚ್ಚರಿಕೆಯಿಂದ ಅಧ್ಯಯನ ಮಾಡಿ ಕ್ರಮಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:9
8 ತಿಳಿವುಗಳ ಹೋಲಿಕೆ  

ಅವನು ಮೂರು ಸಾವಿರ ಜ್ಞಾನೋಕ್ತಿಗಳನ್ನು ಹೇಳಿದನು. ಅವನ ಹಾಡುಗಳು ಸಾವಿರದ ಐದು.


ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:


ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳೇ.


ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ಉಂಟುಮಾಡುತ್ತಾನೆ. ಅಜ್ಞಾನಿಯಾದ ಮಗನಾದರೋ ತನ್ನ ತಾಯಿಗೆ ಶೋಕವನ್ನುಂಟು ಮಾಡುತ್ತಾನೆ.


ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.


ಇದಲ್ಲದೆ ಯೆಹೋವ ದೇವರು ಸೊಲೊಮೋನನಿಗೆ ವಾಗ್ದಾನ ಮಾಡಿದಂತೆ ಜ್ಞಾನವನ್ನು ಕೊಟ್ಟರು. ಹೀರಾಮನಿಗೂ, ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.


ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು