ಪ್ರಸಂಗಿ 2:1 - ಕನ್ನಡ ಸಮಕಾಲಿಕ ಅನುವಾದ1 “ಈಗ ಬಾ, ಯಾವುದು ಒಳ್ಳೆಯದು ಎಂಬುದನ್ನು ಸುಖಭೋಗಗಳಿಂದ ನಿನ್ನನ್ನು ಪರೀಕ್ಷಿಸುವೆನು,” ಎಂದು ನನ್ನ ಮನಸ್ಸಿನಲ್ಲಿ ಹೇಳಿಕೊಂಡೆ. ಆದರೆ ಅದೂ ಕೂಡ ವ್ಯರ್ಥವಾದದ್ದೆಂದು ರುಜುವಾತಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಬಾ ಮನವೇ, ಸಂತೋಷದ ಮೂಲಕ ನಿನ್ನನ್ನು ಪರೀಕ್ಷಿಸುವೆ; ಸುಖಭೋಗವನ್ನು ಅನುಭವಿಸು” ಎಂದು ಮನಸ್ಸಿನಲ್ಲೇ ಹೇಳಿಕೊಂಡೆ. ಆದರೆ ಇದೂ ವ್ಯರ್ಥವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾನು ಮನಸ್ಸಿನಲ್ಲಿ, - ಬಾ, ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಸುಖದ ರುಚಿ ನೋಡು ಅಂದುಕೊಂಡೆನು. ಆಹಾ, ಇದೂ ವ್ಯರ್ಥವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾನು ನನ್ನ ಹೃದಯದಲ್ಲಿ, “ಬಾ, ನಿನ್ನನ್ನು ಸುಖದ ಮೂಲಕ ಪರೀಕ್ಷಿಸುವೆನು; ಆಗ ನೀನು ನೀತಿಮಾರ್ಗವನ್ನು ಕಲಿತುಕೊಳ್ಳುವೆ” ಎಂದುಕೊಂಡೆನು. ಆದರೆ ಇದು ಸಹ ವ್ಯರ್ಥವೆಂದು ಕಂಡುಕೊಂಡೆನು. ಅಧ್ಯಾಯವನ್ನು ನೋಡಿ |