Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:10 - ಕನ್ನಡ ಸಮಕಾಲಿಕ ಅನುವಾದ

10 ನನ್ನ ಕಣ್ಣು ಬಯಸಿದ್ದೆಲ್ಲವನ್ನು ಅದರಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ. ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು. ಇದು ನನ್ನ ಎಲ್ಲಾ ಪ್ರಯಾಸದಿಂದ ನನಗೆ ಬಂದ ಬಹುಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ಒಪ್ಪಿಸಿದೆ. ಹೃದಯ ಕೋರಿದ ಸಂತೋಷವನ್ನು ಅದಕ್ಕೆ ನಿರಾಕರಿಸಲಿಲ್ಲ. ನನ್ನ ಮನ ಎಲ್ಲಾ ಕಾರ್ಯಕಲಾಪಗಳಲ್ಲೂ ಉಲ್ಲಾಸಗೊಳ್ಳುತ್ತಿತ್ತು. ಇವೆಲ್ಲ ನನ್ನ ಪ್ರಯಾಸಕ್ಕೆ ದೊರೆತ ಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ; ಯಾವ ಸಂತೋಷವನ್ನನುಭವಿಸುವದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ; ಏಕಂದರೆ ನನ್ನ ಹೃದಯವು ನನ್ನ ಕಾರ್ಯಗಳಲ್ಲೆಲ್ಲಾ ಹರ್ಷಿಸುತ್ತಿತ್ತು; ನನ್ನ ಪ್ರಯಾಸದಿಂದೆಲ್ಲಾ ನನಗಾದ ಲಾಭವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲಿ ನನ್ನ ಹೃದಯವನ್ನು ನಾನು ತಡೆಹಿಡಿಯಲಿಲ್ಲ; ಯಾಕೆಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:10
21 ತಿಳಿವುಗಳ ಹೋಲಿಕೆ  

ಈ ನಿರರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ದೇವರು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ, ನೀನು ಪ್ರೀತಿಸುವ ನಿನ್ನ ಹೆಂಡತಿಯೊಡನೆ ಆನಂದದಿಂದ ವಾಸಿಸು. ಸೂರ್ಯನ ಕೆಳಗೆ ನೀನು ಪಡುವ ನಿನ್ನ ಜೀವನದ ಕಷ್ಟದಲ್ಲಿ ಇದೇ ನಿನ್ನ ಪಾಲಾಗಿದೆ.


ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.


ಆದಕಾರಣ ಮನುಷ್ಯನು ತನ್ನ ಕೆಲಸ ಕಾರ್ಯಗಳಲ್ಲಿ ಆನಂದಿಸುವುದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲವೆಂದು ನಾನು ನೋಡಿದೆನು. ಏಕೆಂದರೆ ಇದೇ ಅವನ ಪಾಲು. ಆದ್ದರಿಂದ ತನ್ನ ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ವ್ಯರ್ಥವಾದವುಗಳಿಂದ ನನ್ನ ಕಣ್ಣುಗಳನ್ನು ತಿರುಗಿಸಿ, ನಿಮ್ಮ ವಾಕ್ಯದ ಅನುಸಾರವಾಗಿ ನನ್ನ ಜೀವವನ್ನು ಕಾಪಾಡಿರಿ.


ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ.


ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.


ಸೂರ್ಯನ ಕೆಳಗೆ ತಾನು ಪ್ರಯಾಸಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?


ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.


ಹೆಚ್ಚು ಅಪೇಕ್ಷಿಸಿ ಅಲೆದಾಡುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದು ಉತ್ತಮ. ಗಾಳಿಯನ್ನು ಬೆನ್ನಟ್ಟಿದಂತೆ ಇದೂ ಕೂಡ ವ್ಯರ್ಥವೇ.


ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.


“ಕನ್ನಿಕೆಯನ್ನು ಕಾಮದೃಷ್ಟಿಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ನಾನು ಒಡಂಬಡಿಕೆಯನ್ನು ಮಾಡಿಕೊಂಡೆನು.


ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾತಿನಲ್ಲಿ ಫಿಲಿಷ್ಟಿಯರ ಪುತ್ರಿಯರೊಳಗೆ ಒಬ್ಬ ಸ್ತ್ರೀಯನ್ನು ಕಂಡೆನು. ಈಗ ಅವಳನ್ನು ನನಗೆ ಮದುವೆ ಮಾಡಿರಿ,” ಎಂದನು.


ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.


ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.


ಹಣವನ್ನು ಪ್ರೀತಿಸುವವರಿಗೆ ಎಷ್ಟು ಹಣ ಇದ್ದರೂ ಸಾಕಾಗದು. ಆಸ್ತಿಯನ್ನು ಪ್ರೀತಿಸುವವನು ತನ್ನ ಆದಾಯದಿಂದ ತೃಪ್ತಿಗೊಳ್ಳುವುದಿಲ್ಲ. ಇದೂ ಸಹ ವ್ಯರ್ಥವೇ.


ಅದೇನೆಂದರೆ, ಮನುಷ್ಯನು ಹೃದಯದಲ್ಲಿ ಬಯಸಿದ್ದನ್ನು ಕೊರತೆಯಾಗದಂತೆ ದೇವರು ಅವನಿಗೆ ಧನ, ಐಶ್ವರ್ಯ, ಸನ್ಮಾನವನ್ನು ಕೊಡುತ್ತಾರೆ. ಆದರೆ ಅದನ್ನು ಅನುಭವಿಸುವಂತೆ ದೇವರು ಸಾಮರ್ಥ್ಯವನ್ನು ಕೊಡುವುದಿಲ್ಲ. ಆದುದರಿಂದ ಪರರು ಅದನ್ನು ಅನುಭವಿಸುತ್ತಾರೆ. ಇದು ವ್ಯರ್ಥವೂ ವ್ಯಸನಕರವಾದ ಕೇಡು.


ಅವರ ಪ್ರೀತಿಯೂ ಅವರ ದ್ವೇಷವೂ ಅವರ ಅಸೂಯೆ ಕೂಡ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಸೂರ್ಯನ ಕೆಳಗೆ ನಡೆಯುವ ಯಾವ ಸಂಗತಿಗಳಲ್ಲಿಯೂ ಸತ್ತವರಿಗೆ ಇನ್ನೆಂದಿಗೂ ಪಾಲು ಇಲ್ಲ.


“ಈಗ ಬಾ, ಯಾವುದು ಒಳ್ಳೆಯದು ಎಂಬುದನ್ನು ಸುಖಭೋಗಗಳಿಂದ ನಿನ್ನನ್ನು ಪರೀಕ್ಷಿಸುವೆನು,” ಎಂದು ನನ್ನ ಮನಸ್ಸಿನಲ್ಲಿ ಹೇಳಿಕೊಂಡೆ. ಆದರೆ ಅದೂ ಕೂಡ ವ್ಯರ್ಥವಾದದ್ದೆಂದು ರುಜುವಾತಾಯಿತು.


ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.


ತನ್ನ ಜೀವಮಾನವೆಲ್ಲಾ ಅವನು ಕತ್ತಲೆಯಲ್ಲಿ ಕಳೆಯುತ್ತಾನೆ. ಅವನಿಗೆ ವ್ಯಾಧಿಯೊಂದಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.


ಆದುದರಿಂದ ನಾನು ಸಂತೋಷವನ್ನು ಮೆಚ್ಚಿದೆನು. ಏಕೆಂದರೆ ಮನುಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವುದೂ ತಿನ್ನುವುದೂ ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದಿಲ್ಲ. ಸೂರ್ಯನ ಕೆಳಗೆ ದೇವರು ಮನುಷ್ಯನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟಕ್ಕೆ ಸುಖಾನುಭವವು ಅವನಿಗೆ ಸೇರಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು