Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:11 - ಕನ್ನಡ ಸಮಕಾಲಿಕ ಅನುವಾದ

11 ನನ್ನ ಕೈಗಳು ನಡೆಸಿದವುಗಳೆಲ್ಲವನ್ನೂ ನಾನು ಸಾಧಿಸಲು ಪ್ರಯಾಸಪಟ್ಟದ್ದನ್ನೂ ಪರಿಶೀಲಿಸಿ ನೋಡಿದೆ. ಗಾಳಿಯನ್ನು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥವಾಗಿತ್ತು. ಸೂರ್ಯನ ಕೆಳಗೆ ಯಾವುದೂ ಲಾಭಕರವಾಗಿ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ನಾನೇ ಸ್ವತಃ ಮಾಡಿದ ಎಲ್ಲಾ ಕೆಲಸಕಾರ್ಯಗಳನ್ನೂ ಪಟ್ಟ ಎಲ್ಲ ಪ್ರಯಾಸವನ್ನೂ ಗಮನವಿಟ್ಟು ಪರಿಶೀಲಿಸಿದೆ. ಆದರೆ ಇಗೋ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಎಲ್ಲವೂ ವ್ಯರ್ಥ; ಲೋಕದಲ್ಲಿ ಲಾಭಕರವಾದುದು ಏನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ನನ್ನ ಕೈಯಿಂದ ನಡಿಸಿದ ಎಲ್ಲಾ ಕೆಲಸಗಳಲ್ಲಿಯೂ ನಾನು ಪಟ್ಟ ಪ್ರಯಾಸದಲ್ಲಿಯೂ ದೃಷ್ಟಿಯಿಟ್ಟೆನು; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು, ಲೋಕದಲ್ಲಿ ಯಾವ ಲಾಭವೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಕಾರ್ಯಗಳನ್ನೂ ನನ್ನ ಪ್ರಯಾಸವನ್ನೂ ಆಲೋಚಿಸಿದೆ. ಗಾಳಿಯನ್ನು ಹಿಂದಟ್ಟಿದ ಹಾಗೆ ಅದೆಲ್ಲಾ ವ್ಯರ್ಥವೆಂದು ಕಂಡುಕೊಂಡೆ. ನಮ್ಮ ಈ ಜೀವಮಾನದ ಯಾವ ಕೆಲಸಗಳಿಂದಲೂ ಲಾಭವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:11
13 ತಿಳಿವುಗಳ ಹೋಲಿಕೆ  

ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ. ಗಾಳಿಯನ್ನು ಹಿಂದಟ್ಟುವಂತೆ ಎಲ್ಲವೂ ವ್ಯರ್ಥ.


ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸಗಳಿಂದ ಅವನಿಗೆ ಲಾಭವೇನು?


ಸಂತೃಪ್ತಿಯೊಂದಿಗಿರುವ ದೇವಭಕ್ತಿಯೇ ದೊಡ್ಡ ಲಾಭವು.


ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ, ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.


ದೇವರು ತಾವು ಉಂಟು ಮಾಡಿದ್ದನ್ನೆಲ್ಲಾ ನೋಡಲು, ಅವೆಲ್ಲವೂ ಬಹಳ ಒಳ್ಳೆಯದಾಗಿದ್ದವು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ.


ನನ್ನ ಆಯುಸ್ಸು ಎಷ್ಟು ಕಡಿಮೆ ಎಂದು ಜ್ಞಾಪಕಮಾಡಿಕೊಳ್ಳಿರಿ. ನಿರ್ಮಿಸಿದ ಎಲ್ಲಾ ಮನುಷ್ಯರೂ ವ್ಯರ್ಥವಾಗಿದ್ದಾರೆ.


ಆಗ ಜ್ಞಾನವನ್ನೂ ಮನಗುಂದುವಿಕೆಯನ್ನೂ ಬುದ್ಧಿಹೀನತೆಯನ್ನೂ ತಿಳಿದುಕೊಳ್ಳುವಂತೆ ನಾನು ಮನಸ್ಸಿಟ್ಟೆನು, ಅದರ ಜೊತೆಗೆ ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ, ಎಂದು ನಾನು ಅರಿತುಕೊಂಡೆನು.


ಹಾಗಾದರೆ, ಪ್ರಯಾಸ ಪಡುವುದರಲ್ಲಿ ದುಡಿಯುವವನಿಗೆ ಲಾಭವೇನಿದೆ?


ಹಣವನ್ನು ಪ್ರೀತಿಸುವವರಿಗೆ ಎಷ್ಟು ಹಣ ಇದ್ದರೂ ಸಾಕಾಗದು. ಆಸ್ತಿಯನ್ನು ಪ್ರೀತಿಸುವವನು ತನ್ನ ಆದಾಯದಿಂದ ತೃಪ್ತಿಗೊಳ್ಳುವುದಿಲ್ಲ. ಇದೂ ಸಹ ವ್ಯರ್ಥವೇ.


ಇದು ಕೂಡ ವ್ಯಸನಕರವಾದ ಕೇಡು: ಮನುಷ್ಯನು ಹೇಗೆ ಬಂದನೋ, ಹಾಗೆಯೇ ಹೋಗುವನು. ಗಾಳಿಗಾಗಿ ಪ್ರಯಾಸಪಟ್ಟವನಿಗೆ ಲಾಭವೇನಿದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು