Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:16 - ಕನ್ನಡ ಸಮಕಾಲಿಕ ಅನುವಾದ

16 ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ಬಹಳ ದಿನಗಳವರೆಗೆ ಜ್ಞಾಪಕಮಾಡಿಕೊಳ್ಳುವುದಿಲ್ಲ. ಇವರಿಬ್ಬರನ್ನೂ ಮರೆತುಹೋದ ದಿನಗಳು ಈಗಾಗಲೇ ಬಂದಿವೆ. ಮೂಢನಂತೆ ಜ್ಞಾನಿಯೂ ಸಹ ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಏಕೆಂದರೆ ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ನಿರಂತರವಾಗಿ ಮರೆತುಹೋಗುವರು. ಮುಂದಿನ ಕಾಲದವರು ಈಗಿನವರನ್ನೆಲ್ಲ ಮರೆತುಬಿಡುವರು ಎಂಬುದು ನಿಶ್ಚಯ. ನಿಸ್ಸಂದೇಹವಾಗಿ ಮೂಢನಂತೆ ಜ್ಞಾನಿಯು ಮೃತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಏಕಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ನಿರಂತರವಾಗಿ ಮರೆತುಹೋಗುವನು. ಈಗಿನವರೆಲ್ಲಾ ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರಷ್ಟೆ. ಆಹಾ, ಮೂಢನಂತೆ ಜ್ಞಾನಿಯೂ ಸಾಯುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಕೆಂದರೆ ಮೂಢನು ಸಾಯುವಂತೆ ಜ್ಞಾನಿಯೂ ಸಾಯುವುದರಿಂದ ಜನರು ಜ್ಞಾನಿಯನ್ನಾಗಲಿ ಮೂಢನನ್ನಾಗಲಿ ಸದಾಕಾಲ ಜ್ಞಾಪಿಸಿಕೊಳ್ಳುವುದಿಲ್ಲ. ಅವರ ಕಾರ್ಯಗಳನ್ನು ಮುಂದಿನ ಕಾಲದ ಜನರು ಮರೆತುಬಿಡುವರು. ಆದ್ದರಿಂದ ಜ್ಞಾನಿಗೂ ಮೂಢನಿಗೂ ಯಾವ ವ್ಯತ್ಯಾಸವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:16
17 ತಿಳಿವುಗಳ ಹೋಲಿಕೆ  

ಹಿಂದಿನ ಕಾಲದ ಜನರ ಜ್ಞಾಪಕವು ಈಗಿನವರಿಗಿಲ್ಲ. ಮುಂದಿನ ಕಾಲದಲ್ಲಿ ಬರುವವರ ಜ್ಞಾಪಕವು ಅವುಗಳ ಮುಂದಿನ ಕಾಲದ ಜನರಿಗೆ ಇರುವುದಿಲ್ಲ.


ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿದ್ದಾರೆ, ಆದರೆ ಸತ್ತವರಿಗೆ ಏನೂ ತಿಳಿಯದು; ಅವರಿಗೆ ಇನ್ನು ಮೇಲೆ ಪ್ರತಿಫಲ ಇಲ್ಲ. ಅವರ ಹೆಸರನ್ನು ಸಹ ಜನರು ಮರೆತುಬಿಡುತ್ತಾರೆ.


ಕತ್ತಲೆಯಲ್ಲಿ ನಿಮ್ಮ ಅದ್ಭುತಗಳೂ ಮರೆತುಹೋಗಿರುವ ದೇಶದಲ್ಲಿ ನಿಮ್ಮ ನೀತಿಯೂ ತಿಳಿಯಲಾಗುವುದೋ?


ತರುವಾಯ ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.


ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.


ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಇತರರ ಮುಂದೆ ಹೇಗೆ ವರ್ತಿಸಬೇಕು ಎಂದು ತಿಳಿದುಕೊಳ್ಳುವುದರಿಂದ ಬಡವರಿಗೇನು ಲಾಭ?


ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುತ್ತದೆ. ಆದರೆ ಮೂಢನು ಕತ್ತಲೆಯಲ್ಲಿ ನಡೆಯುತ್ತಾನೆ. ಇವರಿಬ್ಬರಿಗೂ ಒಂದೇ ಗತಿಯು ಸಂಭವಿಸುವುದೆಂದೂ ನಾನು ಗ್ರಹಿಸಿಕೊಂಡೆನು.


ಗಾಳಿಯು ಅದರ ಮೇಲೆ ಬೀಸುತ್ತಲೇ ಹೂವು ಇಲ್ಲದೆ ಹೋಗುತ್ತದೆ; ಅದು ಇದ್ದ ಸ್ಥಳವನ್ನು ಪುನಃ ಕಾಣುವುದಿಲ್ಲ.


ಏಕೆಂದರೆ, ಜ್ಞಾನಿಗಳು ಸಾಯುವುದನ್ನು ಕಾಣುತ್ತೇವೆ. ಹಾಗೆಯೇ ಮೂರ್ಖರೂ ಜ್ಞಾನಹೀನರೂ ಸಹ ನಾಶವಾಗುತ್ತಾರೆ. ಅವರ ಆಸ್ತಿಯನ್ನು ಇತರರು ಪಡೆಯುತ್ತಾರೆ.


ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೀಗೆ ಹಾಡಿದನು: “ಬುದ್ಧಿಹೀನನು ಸತ್ತ ಹಾಗೆಯೇ, ಅಬ್ನೇರನು ಸತ್ತನೋ?


ಹಲವು ವರ್ಷಗಳ ಬಳಿಕ ಯೋಸೇಫನೂ ಅವನ ಸಹೋದರರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.


ಆಗ ನಾನು ನನ್ನ ಮನಸ್ಸಿನಲ್ಲಿ, “ಮೂಢನಿಗೆ ಸಂಭವಿಸುವ ಗತಿಯೂ ನನಗೂ ಸಂಭವಿಸುತ್ತದೆ. ನಾನು ಜ್ಞಾನಿಯಾಗುವುದರಿಂದ ಲಾಭವೇನು?” “ಇದು ಸಹ ವ್ಯರ್ಥವೇ,” ಎಂದುಕೊಂಡೆನು.


ಔತಣದ ಮನೆಗೆ ಹೋಗುವುದಕ್ಕಿಂತ, ಶೋಕದ ಮನೆಗೆ ಹೋಗುವುದು ಲೇಸು. ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು.


ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನೂ ನಾನು ನೋಡಿದ್ದೇನೆ. ಆದರೆ ಜನರು ಪರಿಶುದ್ಧ ಸ್ಥಳಕ್ಕೆ ಹೋಗಿ ಬಂದ ಆ ದುಷ್ಟರನ್ನು ಅವರಿದ್ದ ಪಟ್ಟಣದಲ್ಲಿ ಹೊಗಳುತ್ತಾರೆ. ಇದೂ ಸಹ ನಿರರ್ಥಕವಾದದ್ದು.


ಆಗ ಅದರಲ್ಲಿ ಒಬ್ಬ ಜ್ಞಾನಿಯಾದ ಬಡ ಮನುಷ್ಯನು ಬಂದು, ತನ್ನ ಜ್ಞಾನದಿಂದ ಆ ಪಟ್ಟಣವನ್ನು ರಕ್ಷಿಸಿದನು. ಆದರೂ ಆ ಬಡ ಮನುಷ್ಯನನ್ನು ಯಾರೂ ಜ್ಞಾಪಕ ಮಾಡಿಕೊಳ್ಳಲಿಲ್ಲ.


ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ. ಮೂಢರ ಬುದ್ಧಿಹೀನತೆಯು ಮೋಸಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು