ಪ್ರಸಂಗಿ 2:17 - ಕನ್ನಡ ಸಮಕಾಲಿಕ ಅನುವಾದ17 ಸೂರ್ಯನ ಕೆಳಗೆ ನಡೆಯುವ ಕಾರ್ಯವು ನನಗೆ ದುಃಖಕರವಾಗಿ ತೋರಿತು. ಆದಕಾರಣ ನಾನು ನನ್ನ ಜೀವನವನ್ನು ಹಗೆ ಮಾಡಿದೆನು. ಗಾಳಿಯನ್ನು ಬೆನ್ನಟ್ಟುವಂತೆ ಎಲ್ಲವೂ ವ್ಯರ್ಥವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಲೋಕದ ಆಗುಹೋಗುಗಳು ಕೇಡಿಗೆ ಈಡಾಗುವುವೆಂದು ನನಗೆ ಕಂಡುಬಂದಿತು. ಜೀವನವೇ ನೀರಸವೆಂದು ನನಗೆ ತೋಚಿತು; ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಸಮಸ್ತವೂ ವ್ಯರ್ಥವೇ ಸರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಲೋಕವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದರಿಂದ ಜೀವವೇ ಅಸಹ್ಯವಾಗಿ ತೋರಿತು; ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ಲೋಕದ ಕಾರ್ಯಗಳೆಲ್ಲಾ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ನನಗೆ ಕಂಡುಬಂದದ್ದರಿಂದ ಜೀವನವೇ ನನಗೆ ಅಸಹ್ಯವಾಯಿತು. ಅಧ್ಯಾಯವನ್ನು ನೋಡಿ |