ಪ್ರಸಂಗಿ 2:19 - ಕನ್ನಡ ಸಮಕಾಲಿಕ ಅನುವಾದ19 ನನ್ನ ನಂತರ ಬರುವವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ತೋರ್ಪಡಿಸಿಕೊಂಡದರ ಮೇಲೆಯೂ ಅವನು ಆಳುವನು. ಇದು ವ್ಯರ್ಥವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನನ್ನ ನಂತರ ಬರುವವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಅವನು ಎಂಥವನಾದರೂ ನಾನು ಲೋಕದಲ್ಲಿ ಬುದ್ಧಿ ಖರ್ಚುಮಾಡಿ ಗಳಿಸಿದ ದುಡಿಮೆಯ ಫಲಕ್ಕೆಲ್ಲ ಅವನು ಒಡೆಯನಾಗುತ್ತಾನೆ. ಇದು ಸಹ ವ್ಯರ್ಥವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವದರಲ್ಲಿ ಜ್ಞಾನವನ್ನೂ ಪ್ರಯಾಸವನ್ನೂ ವ್ರಯಮಾಡಿದ್ದೇನೋ ಅದರ ಮೇಲೆ ದೊರೆತನ ಮಾಡುವನು. ಇದೂ ವ್ಯರ್ಥ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ಜ್ಞಾನವನ್ನೂ ಪ್ರಯಾಸವನ್ನೂ ಯಾವುದರಲ್ಲಿ ವಿನಿಯೋಗಿಸಿದ್ದೇನೋ ಅದರ ಮೇಲೆ ಬೇರೊಬ್ಬನು ದೊರೆತನ ಮಾಡುವನು. ಅವನು ಜ್ಞಾನಿಯೋ ಮೂಢನೋ ನನಗೆ ಗೊತ್ತಿಲ್ಲ. ಇದೂ ವ್ಯರ್ಥವೇ. ಅಧ್ಯಾಯವನ್ನು ನೋಡಿ |