Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:26 - ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನಲ್ಲವೆ; ಪಾಪಿಗಾದರೋ ತನ್ನ ಮೆಚ್ಚಿಕೆಯಾದವನಿಗೆ ಒದಗತಕ್ಕವುಗಳನ್ನು ಕೂಡಿಸಿಡುವ ಪ್ರಯಾಸವನ್ನೇ ನೇವಿುಸುತ್ತಾನೆ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:26
24 ತಿಳಿವುಗಳ ಹೋಲಿಕೆ  

ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.


ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.


ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು; ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ.


ಯೆಹೋವ ದೇವರು ನೋಹನಿಗೆ, “ನೀನೂ, ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಸೇರಿಕೊಳ್ಳಿರಿ. ಏಕೆಂದರೆ ಈ ಕಾಲದವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವುದನ್ನು ನಾನು ನೋಡಿದ್ದೇನೆ.


ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ. ಗಾಳಿಯನ್ನು ಹಿಂದಟ್ಟುವಂತೆ ಎಲ್ಲವೂ ವ್ಯರ್ಥ.


ಇಬಿಸ್ ಪಕ್ಷಿಗೆ ಜ್ಞಾನವನ್ನು ಕೊಟ್ಟವರು ಯಾರು? ಕೋಳಿಹುಂಜಕ್ಕೆ ಅರಿವನ್ನು ಕೊಟ್ಟವರು ಯಾರು?


“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.


ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ. ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.


ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.


ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ.


ದೇವರಿಲ್ಲದೆ ಯಾರಿಗೆ ಊಟ ದೊರಕಿತು? ದೇವರಿಲ್ಲದೆ ಯಾರು ಸುಖಾನುಭವ ಹೊಂದುವರು?


ದೇವರು ಮಾನವ ಜನಾಂಗದ ಮೇಲೆ ಹೊರಿಸಿರುವ ಭಾರವನ್ನು ನಾನು ನೋಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು