Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:3 - ಕನ್ನಡ ಸಮಕಾಲಿಕ ಅನುವಾದ

3 ಆಕಾಶದ ಕೆಳಗೆ ಮನುಷ್ಯರು ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಹಿತ ಎಂದು ನಾನು ತಿಳಿದುಕೊಳ್ಳಲು ಬಯಸಿದೆ. ನನ್ನ ಮನಸ್ಸು ಇನ್ನೂ ಜ್ಞಾನದಿಂದಿರುವಾಗಲೇ ದ್ರಾಕ್ಷಾರಸದಿಂದ ಸಂತೋಷ ಪಡೋಣ, ಮೂರ್ಖತನವನ್ನು ಅಪ್ಪಿಕೊಳ್ಳೋಣ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಕಾಶದ ಕೆಳಗೆ ನರಜನ್ಮದವರು ಅಲ್ಪಾಯುಷ್ಯದಲ್ಲಿ ಏನು ಮಾಡುವದು ಯುಕ್ತವೆಂದು ನಾನು ತಿಳಿದುಕೊಳ್ಳುವದಕ್ಕೋಸ್ಕರ ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಉತ್ತೇಜನಮಾಡುವದಕ್ಕೂ ಬುದ್ಧಿಹೀನತೆಯನ್ನು ಅವಲಂಬಿಸುವದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮನುಷ್ಯರು ತಮ್ಮ ಕ್ಷಣಿಕ ಜೀವಮಾನದಲ್ಲಿ ಮಾಡತಕ್ಕ ಒಳ್ಳೆಯದನ್ನು ತಿಳಿದುಕೊಳ್ಳಬೇಕೆಂದು ನನ್ನ ಮನಸ್ಸನ್ನು ಜ್ಞಾನದಿಂದ ತುಂಬಿಸಿದೆ; ದೇಹವನ್ನು ದ್ರಾಕ್ಷಾರಸದಿಂದ ತುಂಬಿಸಿದೆ; ಮೂಢತನವನ್ನು ಅವಲಂಭಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:3
22 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.


ಆಗ ಜ್ಞಾನವನ್ನೂ ಮನಗುಂದುವಿಕೆಯನ್ನೂ ಬುದ್ಧಿಹೀನತೆಯನ್ನೂ ತಿಳಿದುಕೊಳ್ಳುವಂತೆ ನಾನು ಮನಸ್ಸಿಟ್ಟೆನು, ಅದರ ಜೊತೆಗೆ ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ, ಎಂದು ನಾನು ಅರಿತುಕೊಂಡೆನು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ಎಲ್ಲಾ ದಿವಸಗಳಲ್ಲಿ ಅವನಿಗೆ ಯಾವುದು ಒಳ್ಳೆಯದೆಂದು ಯಾರಿಗೆ ಗೊತ್ತು? ಅವನು ಹೊರಟುಹೋದ ಮೇಲೆ ಸೂರ್ಯನ ಕೆಳಗೆ ಏನಾಗುತ್ತದೆಂದು ಅವನಿಗೆ ಯಾರು ಹೇಳಬಲ್ಲರು?


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಜ್ಞಾನದ ಮೂಲ ತತ್ವವನ್ನೂ, ದುಷ್ಟತನದ ಮೂಢತನವನ್ನೂ, ಮೂಢತ್ವದ ಹುಚ್ಚುತನವನ್ನೂ ಪರೀಕ್ಷಿಸಿ ತಿಳಿದುಕೊಳ್ಳುವಂತೆ ಮನಸ್ಸುಮಾಡಿದೆನು.


ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.


ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.


ಒಬ್ಬ ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ಆದರೂ ನನಗೆ ನೇಮಕ ಮಾಡಿದ ಪರಿಶ್ರಮದ ದಿನವೆಲ್ಲಾ, ನನಗೆ ಬಿಡುಗಡೆಯಾಗುವವರೆಗೆ ನಾನು ಕಾದುಕೊಂಡಿರುವೆನು.


ಅಬೀಗೈಲಳು ನಾಬಾಲನ ಬಳಿಗೆ ಬಂದಾಗ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸಗೊಂಡಿತ್ತು. ಆದಕಾರಣ ಅವಳು ಉದಯವಾಗುವವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ, ಹೆಚ್ಚಾದದ್ದನ್ನಾಗಲಿ ತಿಳಿಸಲಿಲ್ಲ.


ಯಾಕೋಬನು ಫರೋಹನಿಗೆ, “ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ. ನನ್ನ ವರ್ಷಗಳು ಕಡಿಮೆಯಾದರೂ ಕಠಿಣವಾದವುಗಳು ಆಗಿವೆ. ಅವು ನನ್ನ ಪಿತೃಗಳ ಪ್ರಯಾಣದ ವರ್ಷಗಳಿಗೆ ಸಮವಾಗಿಲ್ಲ,” ಎಂದನು.


“ಆದರೆ ದ್ರಾಕ್ಷಿ ಗಿಡವು ಅವುಗಳಿಗೆ, ‘ದೇವರನ್ನೂ, ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.


ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.


ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.


ಆದುದರಿಂದ ನಾನು ಸಂತೋಷವನ್ನು ಮೆಚ್ಚಿದೆನು. ಏಕೆಂದರೆ ಮನುಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವುದೂ ತಿನ್ನುವುದೂ ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದಿಲ್ಲ. ಸೂರ್ಯನ ಕೆಳಗೆ ದೇವರು ಮನುಷ್ಯನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟಕ್ಕೆ ಸುಖಾನುಭವವು ಅವನಿಗೆ ಸೇರಿರುತ್ತದೆ.


ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು