Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:7 - ಕನ್ನಡ ಸಮಕಾಲಿಕ ಅನುವಾದ

7 ನನಗೆ ದಾಸ, ದಾಸಿಯರನ್ನು ಕೊಂಡುಕೊಂಡೆನು. ನನ್ನ ಮನೆಯಲ್ಲಿ ಜನಿಸಿದ ಇತರ ಗುಲಾಮರು ಸಹ ಇದ್ದರು. ನನಗಿಂತ ಮುಂಚೆ ಯೆರೂಸಲೇಮಿನಲ್ಲಿ, ಇದ್ದವರೆಲ್ಲರಿಗಿಂತಲೂ ಹೆಚ್ಚಾಗಿ ಬಹಳ ಸಂಪತ್ತು ಉಳ್ಳವನಾಗಿ ಹೆಚ್ಚು ದನಕುರಿಗಳ ಮಂದೆಗಳನ್ನು ಹೊಂದಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆ. ಇವರಿಗಾದ ಮಕ್ಕಳು ನನಗೆ ಹುಟ್ಟುಗುಲಾಮರಾದರು. ಇದಲ್ಲದೆ ಜೆರುಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ದನಕುರಿಗಳು ನನಗಾದವು; ನಾನು ಧನವಂತನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆನು; [ಇವರಿಂದ] ಹುಟ್ಟು ಗುಲಾಮರು ಉಂಟಾದರು; ಇದಲ್ಲದೆ ಯೆರೂಸಲೇವಿುನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಲು ದನಕುರಿಗಳ ಧನವುಳ್ಳವನಾದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪುರುಷರನ್ನೂ ಸ್ತ್ರೀಯರನ್ನೂ ಗುಲಾಮರನ್ನಾಗಿ ಕೊಂಡುಕೊಂಡೆ. ನನ್ನ ಮನೆಯಲ್ಲೇ ಹುಟ್ಟಿದ ಗುಲಾಮರೂ ನನಗಿದ್ದರು. ನನಗೆ ದನದ ಹಿಂಡುಗಳೂ ಕುರಿಮಂದೆಗಳೂ ಇದ್ದವು. ಜೆರುಸಲೇಮಿನಲ್ಲಿ ಇದ್ದವರೆಲ್ಲರಿಗಿಂತಲೂ ಹೆಚ್ಚು ವಸ್ತುಗಳನ್ನು ನಾನು ಪಡೆದಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:7
16 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವ ದೇವರು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಅಧಿಕವಾಗಿ ಆಶೀರ್ವದಿಸಿದರು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಕತ್ತೆಗಳೂ ದೊರಕಿದವು.


ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.


ಸೊಲೊಮೋನನ ಸೇವಕರ ವಂಶಜರು: ಸೋಟೈ, ಸೋಫೆರೆತ್, ಪೆರೀದ,


ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ.


ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.


ಮೋವಾಬಿನ ಅರಸನಾದ ಮೇಷನು ಕುರಿ ಮಂದೆಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ, ಒಂದು ಲಕ್ಷ ಟಗರುಗಳ ಉಣ್ಣೆಯನ್ನೂ ಕಪ್ಪವಾಗಿ ಕೊಡುತ್ತಿದ್ದನು.


ಕೊಬ್ಬಿದ ಎತ್ತುಗಳು ಹತ್ತು, ಮೇಯುವ ಎತ್ತುಗಳು ಇಪ್ಪತ್ತು, ಕುರಿಗಳು ನೂರು. ಇವುಗಳ ಹೊರತಾಗಿ ದುಪ್ಪಿಗಳೂ, ಜಿಂಕೆಗಳೂ, ಕೆಂದ ಜಿಂಕೆಗಳೂ, ಕೊಬ್ಬಿದ ಕೋಳಿಗಳೂ ಆಗಿದ್ದವು.


ಅನಂತರ ಅಬ್ರಾಮನು, “ನೀವು ನನಗೆ ಸಂತಾನವನ್ನು ಕೊಡಲಿಲ್ಲ. ನನ್ನ ಮನೆಯಲ್ಲಿರುವ ದಾಸನೇ ಉತ್ತರಾಧಿಕಾರಿಯಾಗಿರುವನು,” ಎಂದನು.


ತನ್ನ ಸಹೋದರನ ಮಗನು ಸೆರೆಯಾಗಿ ಹೋಗಿರುವುದನ್ನು ಕೇಳಿದಾಗ, ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ, ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ, ದಾನಿನವರೆಗೆ ಹಿಂದಟ್ಟಿದನು.


ಅಬ್ರಾಮನು ಪಶುಗಳು, ಬೆಳ್ಳಿ ಮತ್ತು ಬಂಗಾರವನ್ನು ಹೊಂದಿ ಬಹು ಧನವಂತನಾಗಿದ್ದನು.


ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ,


ಸೊಲೊಮೋನನ ಸೇವಕರ ವಂಶಜರು: ಸೋಟೈ, ಹಸ್ಸೋಫೆರೆತ್, ಪೆರೂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು