ಪ್ರಸಂಗಿ 2:8 - ಕನ್ನಡ ಸಮಕಾಲಿಕ ಅನುವಾದ8 ನಾನು ಬೆಳ್ಳಿಬಂಗಾರಗಳನ್ನು, ಅರಸರ ಮತ್ತು ಪ್ರಾಂತಗಳ ವಿಶೇಷ ಸಂಪತ್ತನ್ನು ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗವಿಲಾಸಕ್ಕಾಗಿ ಅನೇಕ ಉಪಪತ್ನಿಯರನ್ನು ಸಂಪಾದಿಸಿಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬೆಳ್ಳಿಬಂಗಾರಗಳನ್ನೂ ಅರಸರ ಹಾಗೂ ಸಾಮಂತರ ಕಪ್ಪಕಾಣಿಕೆಗಳನ್ನೂ ಶೇಖರಿಸಿಕೊಂಡೆ. ಗಾಯಕಗಾಯಕಿಯರೂ ಭೋಗವಿಲಾಸಕ್ಕಾಗಿ ಹಲವಾರು ಉಪಪತ್ನಿಯರೂ ನನಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮತ್ತು ಬೆಳ್ಳಿ ಬಂಗಾರಗಳನ್ನೂ ಅರಸರ ನಜರನ್ನೂ ದಿಗ್ದೇಶಗಳಿಂದ ಕಪ್ಪವನ್ನೂ ಸಂಗ್ರಹಿಸಿಕೊಂಡೆನು; ಗಾಯಕಗಾಯಕಿಯರನ್ನೂ ಮನುಷ್ಯರಿಗೆ ಭೋಗ್ಯರಾದ ಅನೇಕ ಉಪಪತ್ನಿಯರನ್ನೂ ಸಂಪಾದಿಸಿಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇದಲ್ಲದೆ ಬೆಳ್ಳಿಬಂಗಾರಗಳನ್ನು ನನಗೋಸ್ಕರ ಸಂಗ್ರಹಿಸಿದೆ; ರಾಜರುಗಳಿಂದಲೂ ಅವರ ದೇಶಗಳಿಂದಲೂ ಭಂಡಾರಗಳನ್ನು ತೆಗೆದುಕೊಂಡೆ. ನನಗೋಸ್ಕರ ಹಾಡಲು ಗಾಯಕಗಾಯಕಿಯರಿದ್ದರು. ನನ್ನನ್ನು ಸಂತೋಷಪಡಿಸಲು ಅನೇಕ ಉಪಪತ್ನಿಯರಿದ್ದರು. ಮನುಷ್ಯನು ಬಯಸಬಹುದಾದ ಪ್ರತಿಯೊಂದನ್ನೂ ನಾನು ಪಡೆದಿದ್ದೆ. ಅಧ್ಯಾಯವನ್ನು ನೋಡಿ |