Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:14 - ಕನ್ನಡ ಸಮಕಾಲಿಕ ಅನುವಾದ

14 ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರ ಕಾರ್ಯವೆಲ್ಲವು ಶಾಶ್ವತವಾದುದು ಎಂದು ಬಲ್ಲೆ. ಅದಕ್ಕೆ ಯಾವುದನ್ನೂ ಸೇರಿಸಲಾಗದು. ಅದರಿಂದ ಯಾವುದನ್ನೂ ಕಳೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮಾನವರು ಭಯಭಕ್ತಿಯಿಂದ ಇರಬೇಕೆಂಬ ಕಾರಣದಿಂದಲೇ ದೇವರು ಹೀಗೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವರ ಕಾರ್ಯವೆಲ್ಲವೂ ನಿತ್ಯವೆಂದು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಲಾರೆವು, ಅದರಿಂದ ಯಾವದನ್ನೂ ತೆಗೆಯಲಾರೆವು; ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬದೇ ಕಾರಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರ ಕಾರ್ಯಗಳೆಲ್ಲಾ ಶಾಶ್ವತವಾದದ್ದು. ಆತನ ಕಾರ್ಯಗಳಿಗೆ ಮನುಷ್ಯರು ಏನನ್ನೂ ಸೇರಿಸಲಾರರು; ಅವುಗಳಿಂದ ಏನನ್ನೂ ತೆಗೆಯಲಾರರು. ಮನುಷ್ಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬುದೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:14
30 ತಿಳಿವುಗಳ ಹೋಲಿಕೆ  

ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ಆದರೆ ಯೆಹೋವ ದೇವರ ಆಲೋಚನೆಗಳು ಎಂದೆಂದಿಗೂ ಅವರ ಹೃದಯದ ಉದ್ದೇಶಗಳು ತಲತಲಾಂತರಕ್ಕೂ ನಿಲ್ಲುತ್ತವೆ.


ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.


ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.


ದೇವರ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ. ಇಲ್ಲವಾದರೆ ದೇವರು ನಿನ್ನನ್ನು ಗದರಿಸಿ ನಿನ್ನನ್ನು ಸುಳ್ಳುಗಾರನೆಂದು ಸಾಬೀತುಪಡಿಸುವರು.


ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.


ಬಹು ಕನಸುಗಳೂ ಬಹು ಮಾತುಗಳೂ ವ್ಯರ್ಥವಾದವುಗಳು. ಆದ್ದರಿಂದ ನೀನು ದೇವರಿಗೆ ಭಯಪಡು.


ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಎಲ್ಲಾ ಮನುಷ್ಯರೂ ಭಯಪಟ್ಟು ದೇವರ ಕಾರ್ಯಗಳನ್ನು ಸಾರುವರು. ದೇವರು ಮಾಡಿದವುಗಳನ್ನು ಆಲೋಚಿಸಿಕೊಳ್ಳುವರು.


ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.


ಆದ್ದರಿಂದ ಆ ಹೋತವು ಬಹಳವಾಗಿ ಬಲಗೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು, ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


“ದೇವರ ಮಾರ್ಗವು ಪರಿಪೂರ್ಣವಾದದ್ದು; ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು