ಪ್ರಸಂಗಿ 3:17 - ಕನ್ನಡ ಸಮಕಾಲಿಕ ಅನುವಾದ17 ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು, “ನೀತಿವಂತರನ್ನೂ ದುಷ್ಟರನ್ನೂ ದೇವರು ನ್ಯಾಯತೀರಿಸುವನು. ಏಕೆಂದರೆ ಪ್ರತಿಯೊಂದು ಉದ್ದೇಶಕ್ಕೂ, ಪ್ರತಿಯೊಂದು ಕೆಲಸಕ್ಕೂ ಪರೀಕ್ಷೆಯ ಸಮಯವಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ನಾನು ಮನಸ್ಸಿನಲ್ಲಿ - ದೇವರು ಧರ್ಮಿಗಳಿಗೂ ಅಧರ್ಮಿಗಳಿಗೂ ನ್ಯಾಯತೀರಿಸುವನು.; ಆತನ ನ್ಯಾಯಕ್ರಮದಲ್ಲಿ ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯವುಂಟಲ್ಲವೆ ಅಂದುಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ನಾನು ಮನಸ್ಸಿನಲ್ಲಿ, “ದೇವರು ಪ್ರತಿಯೊಂದಕ್ಕೂ ಸಮಯವನ್ನು ಗೊತ್ತುಪಡಿಸಿದ್ದಾನೆ. ಜನರು ಮಾಡುವ ಪ್ರತಿಯೊಂದಕ್ಕೂ ನ್ಯಾಯತೀರಿಸಲು ಆತನು ಸಮಯವನ್ನು ಗೊತ್ತುಪಡಿಸಿದ್ದಾನೆ. ದೇವರು ನೀತಿವಂತರಿಗೂ ದುಷ್ಟರಿಗೂ ನ್ಯಾಯತೀರಿಸುವನು” ಎಂದುಕೊಂಡೆನು. ಅಧ್ಯಾಯವನ್ನು ನೋಡಿ |