Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:21 - ಕನ್ನಡ ಸಮಕಾಲಿಕ ಅನುವಾದ

21 ಮನುಷ್ಯನ ಆತ್ಮವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಗೆ ಹೋಗುತ್ತದೆಂದೂ ಯಾರು ತಿಳಿದಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ, ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ ಯಾರಿಗೆ ಗೊತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮನುಷ್ಯನ ಆತ್ಮ ಮೇಲಕ್ಕೆ ಏರುತ್ತದೋ? ಪಶುವಿನ ಆತ್ಮ ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ? ಯಾರಿಗೆ ಗೊತ್ತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂವಿುಗೆ ಸೇರುತ್ತದೋ ಯಾರಿಗೆ ಗೊತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮನುಷ್ಯನ ಆತ್ಮಕ್ಕೆ ಏನು ಸಂಭವಿಸುವುದೋ ಯಾರಿಗೆ ಗೊತ್ತು? ಮನುಷ್ಯನ ಆತ್ಮವು ದೇವರ ಬಳಿಗೆ ಮೇಲಕ್ಕೆ ಹೋಗುವುದೋ ಪ್ರಾಣಿಯ ಆತ್ಮವು ಭೂಮಿಯೊಳಗೆ ಇಳಿಯುವುದೋ ಯಾರಿಗೆ ಗೊತ್ತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:21
9 ತಿಳಿವುಗಳ ಹೋಲಿಕೆ  

ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.


ನಮ್ಮ ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವುದು ಉತ್ತಮವೆಂದು ಆಶಿಸಿ, ಅದರಲ್ಲಿ ಭರವಸೆ ಉಳ್ಳವರಾಗಿರುತ್ತೇವೆ.


ಈ ಅಪೊಸ್ತಲರ ಸೇವೆಯನ್ನು ವಹಿಸಿಕೊಳ್ಳುವುದಕ್ಕಾಗಿ, ನೀವು ಈ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಿಕೊಂಡಿರುವಿರಿ ಎಂಬುದನ್ನು ನಮಗೆ ತೋರಿಸಿರಿ,” ಎಂದು ಪ್ರಾರ್ಥನೆ ಮಾಡಿದರು.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ನೀವು ಕೇಳಿ ಕಾಪಾಡಿ ಕೈಗೊಂಡರೆ, ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು. ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ.


ಆದರೆ ಮನುಷ್ಯನು ಸತ್ತು ಬಿದ್ದಿರುತ್ತಾನೆ; ಅವನು ಕೊನೆಯುಸಿರೆಳೆದಾಗ ಅವನ ಅಂತ್ಯವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು