Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:12 - ಕನ್ನಡ ಸಮಕಾಲಿಕ ಅನುವಾದ

12 ಒಬ್ಬಂಟಿಗನ ಮೇಲೆ ಜಯ ಸಾಧಿಸಲು, ಇಬ್ಬರು ಎದುರಾಗಿ ನಿಲ್ಲಬಹುದು. ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಬ್ಬಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಕೂಡ ಎದುರಾಗಿ ನಿಲ್ಲಬಹುದು. ಮೂರು ಹುರಿಗಳಿಂದ ಹೆಣೆದ ಹಗ್ಗ ಸುಲಭವಾಗಿ ಕಿತ್ತುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಬ್ಬೊಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಎದುರಾಗಿ ನಿಲ್ಲಬಹುದು; ಮೂರು ಹುರಿಯ ಹಗ್ಗ ಬೇಗ ಕಿತ್ತು ಹೋಗುವದಿಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ವೈರಿಯೊಬ್ಬನು ಒಬ್ಬನನ್ನು ಸೋಲಿಸಬಹುದು; ಆದರೆ ಇಬ್ಬರನ್ನು ಸೋಲಿಸಲು ಅವನಿಗೆ ಕಷ್ಟವಾಗುವುದು; ಒಂದುವೇಳೆ ಮೂವರಿದ್ದರೆ ಅವರು ಮೂರೆಳೆಯ ಹಗ್ಗದಂತೆ ಇರುವುದರಿಂದ ಅವನಿಗೆ ಮತ್ತಷ್ಟು ಕಷ್ಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:12
8 ತಿಳಿವುಗಳ ಹೋಲಿಕೆ  

ಸಮಾಧಾನದ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ.


ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು; ಇವನು ಇಸ್ರಾಯೇಲ್ ಜನರು ಓಡಿ ಹೋದ ತರುವಾಯ ಯುದ್ಧಕ್ಕೆ ಕೂಡಿಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.


ಇವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು. ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ. ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು.


ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.


ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ. ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ?


ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮೂಢ ಮುದಿ ಅರಸನಿಗಿಂತ ಬಡವನಾದರೂ ಜ್ಞಾನಿಯಾದ ಒಬ್ಬ ಯುವಕನೇ ಮೇಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು