ಪ್ರಸಂಗಿ 4:4 - ಕನ್ನಡ ಸಮಕಾಲಿಕ ಅನುವಾದ4 ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮತ್ತು ಸಮಸ್ತಪ್ರಯಾಸವನ್ನೂ ಕೈಗೂಡುವ ಸಕಲ ಕಾರ್ಯವನ್ನೂ ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ. ಅಧ್ಯಾಯವನ್ನು ನೋಡಿ |