Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:9 - ಕನ್ನಡ ಸಮಕಾಲಿಕ ಅನುವಾದ

9 ಒಬ್ಬನಿಗಿಂತ ಇಬ್ಬರು ಲೇಸು, ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಬ್ಬನಿಗಿಂತ ಇಬ್ಬರು ಲೇಸು; ಅವರ ಪ್ರಯಾಸಕ್ಕೆ ಹೆಚ್ಚಿನ ಲಾಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಒಬ್ಬನಿಗಿಂತ ಇಬ್ಬರು ಲೇಸು; ಅವರ ಪ್ರಯಾಸಕ್ಕೆ ಒಳ್ಳೆಯ ಲಾಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಬ್ಬರು ಒಬ್ಬನಿಗಿಂತಲೂ ಉತ್ತಮ. ಇಬ್ಬರು ಒಟ್ಟಾಗಿ ದುಡಿದರೆ ಹೆಚ್ಚು ಗಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:9
15 ತಿಳಿವುಗಳ ಹೋಲಿಕೆ  

ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು.


ಅನಂತರ ಯೆಹೋವ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು,” ಎಂದರು.


ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಕರೆದು, ಅವರಿಗೆ ಅಶುದ್ಧಾತ್ಮಗಳನ್ನು ಹೊರಗಟ್ಟುವ ಅಧಿಕಾರವನ್ನು ಕೊಟ್ಟು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.


ನಾನು ಒಬ್ಬೊಂಟಿಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವುದಕ್ಕೆ ಶಕ್ತನಲ್ಲ. ಅದು ನನಗೆ ಅತಿದೊಡ್ಡ ಭಾರವಾಗಿದೆ.


ಕೊಯ್ಯುವವನು ಕೂಲಿಯನ್ನು ಪಡೆದು ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳುತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಿಸುವರು.


ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.


ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.


ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,


ಪರಿಪೂರ್ಣ ಪ್ರತಿಫಲವನ್ನು ನೀವು ಹೊಂದುವಂತೆ ನಾವು ಪ್ರಯಾಸಪಟ್ಟು ಮಾಡಿದವುಗಳು ನಷ್ಟವಾಗದಂತೆ ಎಚ್ಚರವಹಿಸಿರಿ.


ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. ಅವನು, “ನಾನು ಸುಖಸಂತೋಷವನ್ನು ತೊರೆದು, ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. ಇದು ಕೂಡ ವ್ಯರ್ಥವೇ, ಪ್ರಯಾಸದ ಕೆಲಸವೇ ಸರಿ.


ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು. ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ ಅವನ ಗತಿ ದುರ್ಗತಿಯೇ ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ.


ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು