ಪ್ರಸಂಗಿ 5:10 - ಕನ್ನಡ ಸಮಕಾಲಿಕ ಅನುವಾದ10 ಹಣವನ್ನು ಪ್ರೀತಿಸುವವರಿಗೆ ಎಷ್ಟು ಹಣ ಇದ್ದರೂ ಸಾಕಾಗದು. ಆಸ್ತಿಯನ್ನು ಪ್ರೀತಿಸುವವನು ತನ್ನ ಆದಾಯದಿಂದ ತೃಪ್ತಿಗೊಳ್ಳುವುದಿಲ್ಲ. ಇದೂ ಸಹ ವ್ಯರ್ಥವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹಣದಾಸೆಯುಳ್ಳವನಿಗೆ ಎಷ್ಟು ಹಣ ಇದ್ದರೂ ತೃಪ್ತಿಯಿಲ್ಲ. ಆಸ್ತಿ ಬಯಸುವವನಿಗೆ ಎಷ್ಟು ಆದಾಯವಿದ್ದರೂ ನೆಮ್ಮದಿಯಿಲ್ಲ. ಇದೂ ಸಹ ವ್ಯರ್ಥವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗದು; ಸಮೃದ್ಧಿಯನ್ನು ಬಯಸುತ್ತಲೇ ಇರುವವನಿಗೆ ಆದಾಯವೆಷ್ಟಾದರೂ ಸಾಲದು. ಇದು ಸಹ ವ್ಯರ್ಥ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಹಣದಾಸೆಯುಳ್ಳವನು ತನ್ನಲ್ಲಿ ಎಷ್ಟೇ ಹಣವಿದ್ದರೂ ತೃಪ್ತನಾಗಲಾರನು. ಐಶ್ವರ್ಯದಾಸೆಯುಳ್ಳವನು ಎಷ್ಟೇ ಸಂಪಾದಿಸಿದರೂ ತೃಪ್ತನಾಗುವುದಿಲ್ಲ. ಇದು ಸಹ ವ್ಯರ್ಥ. ಅಧ್ಯಾಯವನ್ನು ನೋಡಿ |