Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:14 - ಕನ್ನಡ ಸಮಕಾಲಿಕ ಅನುವಾದ

14 ಅದು ಹೇಗೆಂದರೆ, ಅನಾಹುತದಿಂದ ಆಸ್ತಿ ಕಳೆದುಹೋಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಆಸ್ತಿ ನಿರರ್ಥಕ ಪ್ರಯತ್ನದಿಂದ ನಷ್ಟವಾಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವದು; ಅವನಿಗೆ ಮಗನಿದ್ದರೆ [ಆ ಮಗನಿಗಾಗಿ] ಅವನ ಕೈಯಲ್ಲಿ ಏನೂ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ಅವನು ಯಾವುದೋ ಕೇಡಿಗೆ ಗುರಿಯಾಗಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು; ಕೊನೆಯಲ್ಲಿ ತನ್ನ ಮಗನಿಗೆ ಕೊಡಲು ಅವನಲ್ಲಿ ಏನೂ ಉಳಿದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:14
17 ತಿಳಿವುಗಳ ಹೋಲಿಕೆ  

ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.


ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.


“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.


ಹಸಿದವರು ಅವನ ಪೈರನ್ನು ತಿಂದುಬಿಡುವರು; ಮುಳ್ಳುಬೇಲಿ ಹಾಕಿದ್ದರೂ ಅದನ್ನು ತೆಗೆದುಕೊಳ್ಳುವರು; ಅವನ ಆಸ್ತಿಯನ್ನು ಬಾಯಾರಿಕೆಯಾದವರು ನುಂಗಿಬಿಡುವರು.


ಅವನು ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು.


ಆಗ ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡಬಿದ್ದು, ಒಂದು ಬೆಳ್ಳಿಯ ಹಣವನ್ನೂ, ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ, “ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆಯಲ್ಲಿ ಸೇರಿಸಿಕೋ, ಎಂದು ಹೇಳುವರು,” ಎಂದರು.’ ”


ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ: ಸಂಗ್ರಹಿಸಿದ ಆಸ್ತಿ ಯಜಮಾನನಿಗೆ ಹಾನಿ.


ತಾಯಿಯ ಗರ್ಭದಿಂದ ಅವನು ಹೇಗೆ ಬರಿಗೈಯಲ್ಲಿ ಬಂದನೋ, ಹಾಗೆ ಬರಿಗೈಯಲ್ಲಿ ಗತಿಸಿ ಹೋಗುವನು. ಅವನು ಪ್ರಯಾಸ ಪಟ್ಟದ್ದಕ್ಕಾಗಿ ಯಾವುದನ್ನು ತೆಗೆದುಕೊಂಡು ಹೋಗುವುದಿಲ್ಲ.


ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”


ಸಿರಿ ಬಂದಾಗ ಜನರ ಹೊಗಳಿಕೆ ತಪ್ಪದು ಎಂಬಂತೆ ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನಸ್ತುತಿಯಿಂದಲೂ ಕೂಡಿದವನಾದರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು