ಪ್ರಸಂಗಿ 5:17 - ಕನ್ನಡ ಸಮಕಾಲಿಕ ಅನುವಾದ17 ತನ್ನ ಜೀವಮಾನವೆಲ್ಲಾ ಅವನು ಕತ್ತಲೆಯಲ್ಲಿ ಕಳೆಯುತ್ತಾನೆ. ಅವನಿಗೆ ವ್ಯಾಧಿಯೊಂದಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವನ ಜೀವಮಾನವೆಲ್ಲ ಅಂಧಕಾರಮಯ, ಅದರಲ್ಲಿ ದುಃಖದುಗುಡ, ರೋಗರುಜಿನ, ಕೋಪತಾಪ ಇದ್ದೇ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನ ಜೀವಮಾನವೆಲ್ಲಾ ಅವನ ಊಟದಲ್ಲಿ ಕತ್ತಲು ಕವಿದಿರುವದು; ಅವನಿಗೆ ಕರಕರೆಯು ಶಾನೆ; ರೋಗರೋಷಗಳು ಇದ್ದೇ ಇರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವನ ಜೀವಮಾನವೆಲ್ಲಾ ವ್ಯಸನದಿಂದಲೂ ದುಃಖದಿಂದಲೂ ಕೂಡಿದೆ. ನಿರಾಶೆಯೂ ಕಾಯಿಲೆಯೂ ಕೋಪವೂ ಅವನನ್ನು ಕಾಡುತ್ತಲೇ ಇರುತ್ತವೆ. ಅಧ್ಯಾಯವನ್ನು ನೋಡಿ |
ಅವರು ಅರಸನಿಗೆ, “ಒಬ್ಬ ಮನುಷ್ಯನು ನಮಗೆ ಎದುರಾಗಿ ಬಂದು, ‘ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿ ಹೋಗಿ, ಯೆಹೋವ ದೇವರು ಹೇಳುವುದು ಏನೆಂದರೆ: ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಜನರನ್ನು ಕಳುಹಿಸಿರುತ್ತೀ? ಇದರ ನಿಮಿತ್ತ, ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂಬುದಾಗಿ ಅವನಿಗೆ ಹೇಳಿರಿ, ಎಂದು ತಿಳಿಸಿದನು,” ಎಂದರು.