Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:18 - ಕನ್ನಡ ಸಮಕಾಲಿಕ ಅನುವಾದ

18 ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಗೋ, ನನಗೆ ಕಂಡುಬಂದ ಇನ್ನೊಂದು ವಿಷಯ: ದೇವರು ಮನುಷ್ಯನಿಗೆ ದಯಪಾಲಿಸಿರುವ ಅಲ್ಪಕಾಲಾವಧಿಯಲ್ಲಿ ಅವನು ತಿಂದು ಕುಡಿಯಬೇಕು. ಲೋಕದಲ್ಲಿ ಪಡಬೇಕಾದ ದುಡಿಮೆಯಲ್ಲೂ ಸುಖವನ್ನು ಅನುಭವಿಸಬೇಕು. ಇದು ಅವನಿಗೆ ಉಚಿತವಾದುದು. ಉತ್ತಮವಾದುದು. ಇದೇ ಅವನಿಗೆ ಬಂದಿರುವ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಗೋ ನಾನು ಕಂಡದ್ದು ಇದೇ; ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದು ಮೇಲಾಗಿಯೂ ಉಚಿತವಾಗಿಯೂ ಇದೆ; ಇದೇ ಅವನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಕಂಡುಕೊಂಡದ್ದೇನೆಂದರೆ, ಒಬ್ಬನು ತನ್ನ ಅಲ್ಪಕಾಲದ ಜೀವಮಾನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವುದೇ ಅವನಿಗೆ ಮೇಲು. ಇದೇ ಅವನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:18
16 ತಿಳಿವುಗಳ ಹೋಲಿಕೆ  

ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.


ಆದಕಾರಣ ಮನುಷ್ಯನು ತನ್ನ ಕೆಲಸ ಕಾರ್ಯಗಳಲ್ಲಿ ಆನಂದಿಸುವುದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲವೆಂದು ನಾನು ನೋಡಿದೆನು. ಏಕೆಂದರೆ ಇದೇ ಅವನ ಪಾಲು. ಆದ್ದರಿಂದ ತನ್ನ ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಆದುದರಿಂದ ನಾನು ಸಂತೋಷವನ್ನು ಮೆಚ್ಚಿದೆನು. ಏಕೆಂದರೆ ಮನುಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವುದೂ ತಿನ್ನುವುದೂ ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದಿಲ್ಲ. ಸೂರ್ಯನ ಕೆಳಗೆ ದೇವರು ಮನುಷ್ಯನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟಕ್ಕೆ ಸುಖಾನುಭವವು ಅವನಿಗೆ ಸೇರಿರುತ್ತದೆ.


ನನ್ನ ಕಣ್ಣು ಬಯಸಿದ್ದೆಲ್ಲವನ್ನು ಅದರಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ. ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು. ಇದು ನನ್ನ ಎಲ್ಲಾ ಪ್ರಯಾಸದಿಂದ ನನಗೆ ಬಂದ ಬಹುಮಾನ.


ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.


ಅವನ ಜೀವಿತ ಕಾಲವೆಲ್ಲಾ ಸಾಯುವ ತನಕ, ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.


ಪ್ರಿಯರೇ, ನೀವು ಇಂಥವರಿಗೂ ಈ ಸೇವೆಯಲ್ಲಿ ಅವರೊಂದಿಗೆ ಪ್ರಯಾಸಪಡುವವರಿಗೂ ವಿಧೇಯರಾಗಿರಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.


ಅವುಗಳನ್ನು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವೂ, ನಿಮ್ಮ ಮಕ್ಕಳೂ, ನಿಮ್ಮ ದಾಸರೂ, ನಿಮ್ಮ ದಾಸಿಯರೂ, ನಿಮ್ಮ ಊರುಗಳಲ್ಲಿರುವ ಲೇವಿಯರೂ ತಿನ್ನಬೇಕು. ಹೀಗೆ ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನೀವು ಸಂತೋಷ ಪಡಬೇಕು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೂ ನಿಮ್ಮ ಮನೆಗೂ ಲೇವಿಯರಿಗೂ ನಿಮ್ಮ ಸಂಗಡ ಇರುವ ಪರವಾಸಿಗಳಿಗೂ ನೀಡಿರುವ ಸೌಲಭ್ಯಕ್ಕಾಗಿ ಸಂತೋಷ ಪಡಬೇಕು.


ಆದರೂ ಹಗಲಿನಲ್ಲಿ ಯೆಹೋವ ದೇವರು ತಮ್ಮ ಪ್ರೀತಿಯನ್ನು ಆಜ್ಞಾಪಿಸುವರು. ರಾತ್ರಿಯಲ್ಲಿ ದೇವರ ಹಾಡನ್ನು ಹಾಡುವೆನು. ನನ್ನ ಜೀವವಾಗಿರುವ ದೇವರಿಗೆ ನಾನು ಪ್ರಾರ್ಥನೆ ಮಾಡುವೆನು.


ಆಕಾಶದ ಕೆಳಗೆ ಮನುಷ್ಯರು ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಹಿತ ಎಂದು ನಾನು ತಿಳಿದುಕೊಳ್ಳಲು ಬಯಸಿದೆ. ನನ್ನ ಮನಸ್ಸು ಇನ್ನೂ ಜ್ಞಾನದಿಂದಿರುವಾಗಲೇ ದ್ರಾಕ್ಷಾರಸದಿಂದ ಸಂತೋಷ ಪಡೋಣ, ಮೂರ್ಖತನವನ್ನು ಅಪ್ಪಿಕೊಳ್ಳೋಣ ಎಂದುಕೊಂಡೆ.


ಅದೇನೆಂದರೆ, ಮನುಷ್ಯನು ಹೃದಯದಲ್ಲಿ ಬಯಸಿದ್ದನ್ನು ಕೊರತೆಯಾಗದಂತೆ ದೇವರು ಅವನಿಗೆ ಧನ, ಐಶ್ವರ್ಯ, ಸನ್ಮಾನವನ್ನು ಕೊಡುತ್ತಾರೆ. ಆದರೆ ಅದನ್ನು ಅನುಭವಿಸುವಂತೆ ದೇವರು ಸಾಮರ್ಥ್ಯವನ್ನು ಕೊಡುವುದಿಲ್ಲ. ಆದುದರಿಂದ ಪರರು ಅದನ್ನು ಅನುಭವಿಸುತ್ತಾರೆ. ಇದು ವ್ಯರ್ಥವೂ ವ್ಯಸನಕರವಾದ ಕೇಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು