Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:19 - ಕನ್ನಡ ಸಮಕಾಲಿಕ ಅನುವಾದ

19 ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೇವರು ಯಾರಿಗಾದರು ಆಸ್ತಿಪಾಸ್ತಿಯನ್ನು ದಯಪಾಲಿಸಿ, ಅದನ್ನು ಅನುಭವಿಸುವ, ಪಾಲಿಗೆ ಬಂದದ್ದನ್ನು ಸವಿಯುವ, ಶ್ರಮದಲ್ಲೂ ಸಂತೋಷಪಡುವ ಶಕ್ತಿಯನ್ನು ಕೊಟ್ಟಿದ್ದರೆ ಅದು ಅವನ ಭಾಗ್ಯ; ಅದು ದೇವರ ಅನುಗ್ರಹವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮತ್ತೂ ಆತನು ಯಾವನಿಗೆ ಆಸ್ತಿಪಾಸ್ತಿಗಳನ್ನು ದಯಪಾಲಿಸುವದಲ್ಲದೆ ಅದನ್ನು ಅನುಭವಿಸಿ ಪಾಲಿಗೆ ಬಂದದ್ದನ್ನು ಹೊಂದಿ ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಡುವನೋ, ಅವನ ಸುಖವು ದೇವರ ಅನುಗ್ರಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ಒಬ್ಬನಿಗೆ ಐಶ್ವರ್ಯವನ್ನೂ ಆಸ್ತಿಯನ್ನೂ ಮತ್ತು ಅವುಗಳನ್ನು ಅನುಭವಿಸುವ ಭಾಗ್ಯವನ್ನೂ ಕೊಟ್ಟಿದ್ದರೆ ಅವನು ಅವುಗಳನ್ನು ಅನುಭವಿಸಲಿ. ಅವನು ತನಗಿರುವಂಥವುಗಳನ್ನು ಹೊಂದಿಕೊಂಡು ತನ್ನ ದುಡಿಮೆಯಲ್ಲಿ ಸಂತೋಷಿಸಲಿ. ಅದು ದೇವರ ಅನುಗ್ರಹವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:19
6 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.


ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.


ಅದೇನೆಂದರೆ, ಮನುಷ್ಯನು ಹೃದಯದಲ್ಲಿ ಬಯಸಿದ್ದನ್ನು ಕೊರತೆಯಾಗದಂತೆ ದೇವರು ಅವನಿಗೆ ಧನ, ಐಶ್ವರ್ಯ, ಸನ್ಮಾನವನ್ನು ಕೊಡುತ್ತಾರೆ. ಆದರೆ ಅದನ್ನು ಅನುಭವಿಸುವಂತೆ ದೇವರು ಸಾಮರ್ಥ್ಯವನ್ನು ಕೊಡುವುದಿಲ್ಲ. ಆದುದರಿಂದ ಪರರು ಅದನ್ನು ಅನುಭವಿಸುತ್ತಾರೆ. ಇದು ವ್ಯರ್ಥವೂ ವ್ಯಸನಕರವಾದ ಕೇಡು.


ಜ್ಞಾನ ಮತ್ತು ತಿಳುವಳಿಕೆಯನ್ನು ನಿನಗೆ ಕೊಡುತ್ತೇನೆ. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸರಲ್ಲಿ ಯಾರಿಗೂ ಇಲ್ಲದಂಥ ಮತ್ತು ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ, ಆಸ್ತಿಯನ್ನೂ, ಘನವನ್ನೂ ಕೊಡುತ್ತೇನೆ,” ಎಂದರು.


ನೀನು ಕೇಳದ ಐಶ್ವರ್ಯವನ್ನೂ, ಘನವನ್ನೂ ಕೊಟ್ಟಿದ್ದೇನೆ. ಆದ್ದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸುಗಳಲ್ಲಿ ಒಬ್ಬನೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು