ಪ್ರಸಂಗಿ 5:2 - ಕನ್ನಡ ಸಮಕಾಲಿಕ ಅನುವಾದ2 ನೀನು ದುಡುಕಿ ಮಾತನಾಡಬೇಡ, ದೇವರ ಮುಂದೆ ಮಾತನಾಡಲು ನಿನ್ನ ಹೃದಯವು ಆತುರಪಡದೇ ಇರಲಿ. ದೇವರು ಪರಲೋಕದಲ್ಲಿದ್ದಾರೆ. ನೀನಾದರೋ ಭೂಮಿಯ ಮೇಲೆ ಇರುವೆ, ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದುಡುಕಿ ಮಾತನಾಡಬೇಡ. ದೇವರ ಸನ್ನಿಧಿಯಲ್ಲಿ ಮಾತುಕೊಡಲು ಆತುರಪಡಬೇಡ. ದೇವರು ಇರುವುದು ಪರಲೋಕದಲ್ಲಿ, ನೀನಿರುವುದಾದರೋ ಭೂಲೋಕದಲ್ಲಿ. ಆದುದರಿಂದ ನಿನ್ನ ಮಾತುಗಳಿಗೆ ಮಿತಿಯಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬಾಯಿದುಡುಕಬೇಡ, ದೇವರ ಮುಂದೆ ಮಾತಾಡಲು ನಿನ್ನ ಹೃದಯದಲ್ಲಿ ಆತುರಪಡದಿರು; ದೇವರು ಆಕಾಶದಲ್ಲಿದ್ದಾನಲ್ಲವೆ, ನೀನು ಭೂವಿುಯಲ್ಲಿದ್ದೀ; ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವರಿಗೆ ಹರಕೆ ಮಾಡುವಾಗ ಎಚ್ಚರಿಕೆಯಿಂದಿರಿ. ನೀವು ದೇವರೊಂದಿಗೆ ಮಾತಾಡುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಮನೋದ್ವೇಗಗಳು ನಿಮ್ಮನ್ನು ಮಾತಿನಲ್ಲಿ ದುಡುಕಿಸದಂತೆ ನೋಡಿಕೊಳ್ಳಿ. ದೇವರು ಪರಲೋಕದಲ್ಲಿರುವುದರಿಂದ ಮತ್ತು ನೀವು ಈ ಲೋಕದಲ್ಲಿರುವುದರಿಂದ ನಿಮ್ಮ ಮಾತುಗಳು ಮಿತವಾಗಿರಲಿ. ಈ ನುಡಿ ಸತ್ಯವಾದದ್ದೇ: ಅಧ್ಯಾಯವನ್ನು ನೋಡಿ |